ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
“ಬಾಣಂತಿಯರ ಸರಣಿ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು ಬಿದಿಗಿಳಿದು ಪ್ರತಿಭಟನೆ ನಡೆಸಿದರೂ ಎಚ್ಚೆತ್ತುಕೊಂಡು ಘಟನೆಯ ಕುರಿತು ಕಠಿಣ ಕ್ರಮ ಕೈಗೊಳ್ಳಲು ತಾತ್ಸಾರ ಧೋರಣೆ ತಾಳಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು, ಬಡವರ ಶಾಪ ತಟ್ಟಲಿದೆ ಎಂದು ವಿಜಯೇಂದ್ರ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ವಿವಿಧ ಪ್ರಕೋಷ್ಠಕಗಳ ರಾಜ್ಯ ಸಂಚಾಲಕ ದತ್ತಾತ್ರಿ, ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಗಾಯತ್ರಿ ದೇವಿ, ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಹೇಮತ್ ಸೇರಿದಂತೆ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.