ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಒಳ ಮೀಸಲಾತಿಯನ್ವಯ ೫೬
,೪೩೨ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವಂತೆ ರಾಜ್ಯದ ೩೧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಾ.೨೫ ರಂದು ಬೆಳಿಗ್ಗೆ ೧೧ ಗಂಟೆಗೆ ಬೃಹತ್ ಪ್ರತಿಭಟನೆ ಹಾಗೂ ಬೆಂಗಳೂರಿನ ಮೌರ್ಯ ಸರ್ಕಲ್‌ನಿಂದ ಮುಖ್ಯಮಂತ್ರಿಗಳ ನಿವಾಸಕ್ಕೆ ರ್‍ಯಾಲಿ ಹೊರಡಲಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾ ಸಾಹೇಬ್ ಎನ್.ಮೂರ್ತಿ ಸ್ಥಾಪಿತ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ ತಿಳಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಮಾದಿಗ ಸಂಘಗಳ ಒಕ್ಕೂಟದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ಒಳ ಮೀಸಲಾತಿಗಾಗಿ ಕಳೆದ ೩೫ ವರ್ಷಗಳಿಂದಲೂ ಹೋರಾಟ ನಡೆಯುತ್ತಿದೆ. ಪರಿಶಿಷ್ಟ ಜಾತಿಯಲ್ಲಿನ ೧೦೧ ಜಾತಿಗಳ ನಡುವೆ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಿಲ್ಲ. ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿ ಒಂದು ವರ್ಷ ಏಳು ತಿಂಗಳು ಕಳೆದಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಷ್ಠಾನಗೊಳಿಸುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆಂದರು.

- Advertisement - 

ರಾಜ್ಯ ಸರ್ಕಾರ ನಾಗಮೋಹನ್‌ದಾಸ್ ಆಯೋಗ ರಚಿಸಿ ವರದಿ ಪಡೆದು ಸಚಿವ ಸಂಪುಟದಲ್ಲಿ ಅನುಮೋದಿಸಿದೆ. ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಮಸೂದೆ ಅಂಗಿಕರಿಸಿ ರಾಜ್ಯಪಾಲರ ಸಹಿ ನಂತರ ವಿಧೇಯಕ ಅಧಿಕೃತಗೊಂಡಿದ್ದರು ಒಳ ಮೀಸಲಾತಿ ಜಾರಿಗೊಳಿಸದೆ ಹಳೆ ರೋಸ್ಟರ್ ಪದ್ದತಿಯಂತೆ ೫೬,೪೩೨ ಹುದ್ದೆಗಳನ್ನು ನೇಮಕಗೊಳಿಸಲು ಫೆ.೨೭ ರಂದು ಸರ್ಕಾರ ಸುತ್ತೋಲೆ ಹೊರಡಿಸಿರುವುದು ಕಾನೂನು ಬಾಹಿರ ಹಾಗೂ ಅವೈಜ್ಞಾನಿಕ. ಪರಿಶಿಷ್ಟ ಜಾತಿಯಲ್ಲಿನ ೧೦೧ ಜಾತಿಗಳಿಗೆ ಜನಸಂಖ್ಯೆಗನುಗುಣವಾಗಿ ಉದ್ಯೋಗ ಹಂಚಿ ಸಮಪಾಲು, ಸಮಬಾಳು ಸಾಮಾಜಿಕ ನ್ಯಾಯ ಕಲ್ಪಿಸಬೇಕೆಂದು ವಿಶ್ವನಾರಾಯಣಮೂರ್ತಿ ಒತ್ತಾಯಿಸಿದರು.

ಗುರುಮೂರ್ತಿ ಜಿ. ಹೆಚ್.ಶಿವಮೂರ್ತಿ, ದಲಿತ ಮುಖಂಡ ಎಂ.ದೇವರಾಜ್, ಮಹಾನಾಯಕ ದಲಿತ ಸೇನೆ ರಾಜ್ಯಾಧ್ಯಕ್ಷ ತಾಳಿಕೆರೆ ಎ.ಮಂಜುನಾಥ್, ಕೆ.ಅವಿನಾಶ್, ಜಿ.ಎಂ.ಪ್ರಕಾಶ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಭೀಮರಾಜ್, ಜಿ.ಶ್ರೀನಿವಾಸ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

- Advertisement - 

 

Share This Article
error: Content is protected !!
";