ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳ ಬೃಹತ್ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್​ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ.

ಪ್ರತಿಭಟನೆಕಾರರು ಮಹಾರಾಣಿ ಕಾಲೇಜು ಬಳಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನಾಕಾರರು ಮಾಡಿದ ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಕಿಲೋ ಮೀಟರ್ ಉದ್ದ ನಿಂತಲ್ಲೇ ನಿಂತುಕೊಂಡಿವೆ. ಇದರಿಂದ ವಾಹನ ಸವಾರರು ಪರದಾಡಿದರು.

- Advertisement - 

ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಆರೋಪಿಸಿದವು. ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಎಡಗೈ ಸಮುದಾಯಕ್ಕೆ ಶೇ. 6 ರಷ್ಟು
, ಬಲ ಸಮುದಾಯಕ್ಕೆ ಶೇ. 6 ರಷ್ಟು ಹಾಗೂ ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 20ರಂದು ವಿಧಾನಸೌಧದಲ್ಲಿ ಘೋಷಿಸಿದ್ದರು.

ನ್ಯಾ.ನಾಗಮೋಹನ್‌ದಾಸ್ ವರದಿಯ ಶಿಫಾರಸುಗಳನ್ನು ಕೆಲ ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿ ಕಲ್ಪಿಸಲಾಗಿದೆ. A, B, C ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಲಾಗಿದ್ದು ಈ ಮೂಲಕ ದಶಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ ಎಂದು ಸಿಎಂ ತಿಳಿಸಿದರು.

- Advertisement - 

ಆದರೆ ಒಳಮೀಸಲಾತಿಯಿಂದ ನಮಗೆ ಅನ್ಯಾಯವಾಗುತ್ತದೆ ಎಂದು ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಿಸಿ,

ಶೇಕಡಾ 17 ಮೀಸಲಾತಿಯನ್ನು ಸುಪ್ರೀಂ ಕೋರ್ಟ್‌ಮಾನದಂಡಗಳ ಅನ್ವಯ ಹಂಚಿಕೆ ಮಾಡುವಂತೆ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ನೇತೃತ್ವದ ಏಕಸದಸ್ಯ ಆಯೋಗ, ಆರು ಶಿಫಾರಸುಗಳನ್ನೂ ಮಾಡಿದ್ದು ಅದನ್ನ ಪಾಲನೆ ಮಾಡಲಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

 

 

Share This Article
error: Content is protected !!
";