ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಾದ್ಯಂತ ಎಲ್ಲ ದುಡಿಯುವ ವರ್ಗಗಳಿಗೆ ಮೇ-1ರ ಕಾರ್ಮಿಕರ ದಿನಾಚರಣೆ ಅಂಗವಾಗಿ ಕಡ್ಡಾಯವಾಗಿ ರಜೆ ಘೋಷಣೆ ಮಾಡುವಂತೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹ ಮಾಡಿದ್ದಾರೆ.
ಮೇ1 ಕಾರ್ಮಿಕರ ದಿನವಾಗಿದ್ದು ಇದು ಪ್ರತಿಯೊಬ್ಬ ಕಾರ್ಮಿಕನ ದಿನವಾಗಿರುತ್ತದೆ. ಕಾರ್ಮಿಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅವರ ಶ್ರಮವನ್ನು ಗುರುತಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸರ್ಕಾರ ಸಾರ್ವಜನಿಕ ರಜೆಯಾಗಿ ಘೋಷಿಸಿದೆ.
ಆದರೆ ವಿಷಾದನೀಯ ಸಂಗತಿ ಎಂದರೆ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಯಾವುದೇ ರೀತಿಯ ರಜೆ ನೀಡದೇ ಕಾರ್ಮಿಕರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಸಿ.ಕೆ ಗೌಸ್ ಪೀರ್ ಆರೋಪಿಸಿದ್ದಾರೆ.