ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೈಗಾರಿಕಾ ಇಲಾಖೆ ಹಾಗೂ ಕೆಐಎಡಿಬಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಪ್ರಮುಖ ವಿಷಯಗಳ ಕುರಿತು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಬುಧವಾರ ನಡೆದ ಸಭೆಯಲ್ಲಿ ಪ್ರಮುಖ ವಿಷಯಗಳನ್ನು ಚರ್ಚಿಸಲಾಗಿದೆ. ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ಕರೆಯುವ ಕುರಿತು ಚರ್ಚಿಸಲಾಯಿತು.
ಪ್ರಗತಿಯಲ್ಲಿರುವ ಹೂಡಿಕೆಯ ಯೋಜನೆಗಳು ಮತ್ತು ಉದ್ಯೋಗ ಸೃಷ್ಠಿ,
ದಿನಾಂಕ 5ರಂದು ಮುಖ್ಯಮಂತ್ರಿಗಳಿಂದ ಕೆಐಎಡಿಬಿ ನೂತನ ಕಚೇರಿಯ ಉದ್ಘಾಟನೆ ನಡೆಯಲಿರುವ ಹಿನ್ನೆಲೆಯಲ್ಲಿ, ಅದರ ಸಿದ್ಧತೆಗಳ ಪರಿಶೀಲನೆ ಕುರಿತು ಚರ್ಚಿಸಲಾಯಿತು.
ಕೆಎಸ್ಐಐಡಿಸಿ ಯಿಂದ ಕೆಐಎಡಿಬಿಗೆ ಹಸ್ತಾಂತರವಾಗಬೇಕಿರುವ ಭೂಮಿ ವಿಚಾರ, ಮುಂಬರುವ ಕೈಗಾರಿಕಾ ಯೋಜನೆಗಳು ಮತ್ತು ಅವುಗಳ ಸುಗಮ ಅನುಷ್ಠಾನಕ್ಕೆ ಅಗತ್ಯವಿರುವ ಆಡಳಿತಾತ್ಮಕ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ಮಾಡಲಾಯಿತು ಎಂದು ಸಚಿವ ಪಾಟೀಲ್ ತಿಳಿಸಿದರು.

