ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಫೆಬ್ರವರಿ 12 ರಿಂದ 14 ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಇಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಆಮಂತ್ರಿಸಿದರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬೆಂಗಳೂರಿನ ಜಾಗತಿಕ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಲೆಂದು ಕೈಗಾರಿಕಾ ಸಚಿವರಿಗೆ ಶುಭಕೋರಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೆ ಭಾರತದ ರಕ್ಷಣಾ ಸಚಿವ ರಾಜನಾಥ್‌ಸಿಂಗ್, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರನ್ನುಭೇಟಿ ಮಾಡಿ ಬೆಂಗಳೂರಿನ ಜಾಗತಿಕ ಹೂಡಿಕೆದಾರರಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ನಮ್ಮ ರಾಜ್ಯದ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ರಾಜ್ಯ ಸಚಿವರಾದ ವಿ ಸೋಮಣ್ಣ ಉಪಸ್ಥಿತರಿದ್ದರು.