ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನವೆಂದು ಘೋಷಿಸಿದ್ದು, ಅಂದು ಜಿಲ್ಲೆಯಾದ್ಯಂತ ಯಾವುದೇ ಸ್ಥಳದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 02ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನವಾಗಿರುವುದರಿಂದ ಪ್ರಾಣಿ ವಧೆ, ಮಾಂಸ ಮಾರಾಟ ಮಾಡದಂತೆ ಜಿಲ್ಲಾ ಪ್ರಾಣಿದಯಾ ಸಂಘದ ಸದಸ್ಯ ಕಾರ್ಯದರ್ಶಿಗಳು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಸೇವಾ ಇಲಾಖೆ ಉಪನಿರ್ದೇಶಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.