ಚಿನ್ನದ ಪದಕಗಳನ್ನು ಬೇಟೆಯಾಡಿದ ವೈದ್ಯಕೀಯ ಪದವಿ ವಿದ್ಯಾರ್ಥಿಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಎಲ್ ಡಿಇ(BLDE) ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ 502 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು ಎಂದು ರಾಜ್ಯ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ವಿಶ್ವವಿದ್ಯಾಲಯದ ಘಟಿಕೋತ್ಸವವು ವಿದ್ಯಾರ್ಥಿಗಳ ವರ್ಷಗಳ ಪರಿಶ್ರಮ, ಮತ್ತು ಕಲಿಕೆಯ ಸಾಧನೆಯನ್ನು ಸಂಭ್ರಮಿಸುವ ಮಹತ್ವದ ದಿನವಾಗಿದೆ. ವಿಜಯಪುರದಲ್ಲಿನ ನಮ್ಮ BLDE ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದು ಸಂತಸ ತರಿಸಿತು.

- Advertisement - 

ಈ ಘಟಿಕೋತ್ಸವದಲ್ಲಿ ಒಟ್ಟು 502 ಪದವಿ ಪ್ರಧಾನ ಮಾಡಲಾಯಿತು. 11 ಪಿ.ಎಚ್.ಡಿ., 3 ಎಂ.ಸಿ.ಎಚ್ (ಯುರಾಲಜಿ), 2 ಡಿ.ಎಂ. (ಕಾರ್ಡಿಯಾಲಜಿ), 239 ವೈದ್ಯಕೀಯ ಸ್ನಾತಕೋತ್ತರ ಪದವಿಗಳು, 3 ಫೆಲೋಶಿಪ್ ಗಳು, 156 ಎಂಬಿಬಿಎಸ್ ಪದವಿಗಳು, 10 ಸ್ನಾತಕೋತ್ತರ ಅಲೈಡ್ ಹೆಲ್ತ್ ಪದವಿಗಳು, 19 ವಿಜ್ಞಾನ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿಗಳು ಮತ್ತು 13 ಬ್ಯಾಚುಲರ್ ಆಫ್ ಫಿಸಿಯೋಥೆರಪಿ,

- Advertisement - 

46 ಅಲೈಡ್ ವಿಜ್ಞಾನ ಪದವಿ ಪ್ರದಾನ ಮಾಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ 28 ಚಿನ್ನದ ಪದಕಗಳು ಮತ್ತು 3 ನಗದು ಬಹುಮಾನಗಳನ್ನು ನೀಡಲಾಯಿತು. ವೈದ್ಯಕೀಯ ಸ್ನಾತಕೋತ್ತರ ವಿಭಾಗದಲ್ಲಿ ಡಾ. ನರ್ಲಾ ಸುರೇಖಾ ಮತ್ತು ಡಾ. ಶಂಕರ್ ನಾರಾಯಣನ್ ಆರ್ ತಲಾ ಎರಡು ಚಿನ್ನದ ಪದಕಗಳನ್ನು ಪಡೆದರು ಎಂದು ಸಚಿವರು ತಿಳಿಸಿದರು.

ಪದವಿ ವೈದ್ಯಕೀಯ ವಿಭಾಗದಲ್ಲಿ ಡಾ. ಯಶ್ ಆರ್ಯ ಅವರು ಐದು ಚಿನ್ನದ ಪದಕಗಳು ಹಾಗೂ ಒಂದು ನಗದು ಬಹುಮಾನ, ಡಾ. ನಿಶ್ಚಿತಾ ಸಿ. ರಾಜ್ ಅವರು ಮೂರು ಚಿನ್ನದ ಪದಕಗಳು ಹಾಗೂ ಒಂದು ನಗದು ಬಹುಮಾನ, ಡಾ. ಸಲೋನಿ ವರ್ಮಾ ಅವರು ಎರಡು ಚಿನ್ನದ ಪದಕಗಳು ಹಾಗೂ ಒಂದು ನಗದು ಬಹುಮಾನ, ಡಾ. ಶಿರೀಷಾ ಎಂ. ಎಸ್. ಅವರು ಎರಡು ಚಿನ್ನದ ಪದಕಗಳನ್ನು ಪಡೆದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ್ ಮಾತನಾಡಿ, BLDE ಡೀಮ್ಡ್ ವಿಶ್ವವಿದ್ಯಾಲಯದ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಕುಲಾಧಿಪತಿ ಬಿ.ಎಂ. ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಪ್ರಭಾರಿ ಕುಲಪತಿ ಡಾ. ಅರುಣ ಇನಾಮದಾರ, ಕುಲಸಚಿವ  ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ್ ಡಾ. ತೇಜಸ್ವಿನಿ ವಲ್ಲಭ, ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಸೈನ್ಸ್ ಮತ್ತು ಟೆಕ್ನಾಲಜಿ ವಿಭಾಗದ ಡೀನ್ ಡಾ. ಎಸ್. ವಿ. ಪಾಟೀಲ,

ವಿವಿ ಪರೀಕ್ಷೆ ನಿಯಂತ್ರಕ ಡಾ. ಶಶಿಧರ ದೇವರಮನಿ, ಕಾನೂನು ವಿಭಾಗದ ಡೀನ್ ಡಾ. ರಘುವೀರ್ ಜಿ. ಕುಲಕರ್ಣಿ, ಡಾ. ಸಚ್ಚಿದಾನಂದ, ಡಾ ಶ್ರೀನಿವಾಸ ಬಳ್ಳಿ, ಡಾ. ಸ್ನೇಹಾ ಜವಳಕರ, ಡಾ. ವಿಜಯಕುಮಾರ  ಕಲ್ಯಾಣಪ್ಪ ಗೋಳ, ಅಶೋಕ ವಾರದ, ಡಾ. ಶ್ರೀಶೈಲ ಗುಡಗಂಟಿ ಸಂಸ್ಥೆಯ ನಿರ್ದೇಶಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

 

Share This Article
error: Content is protected !!
";