ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್‌ಬೆಂಗಳೂರು ಪ್ರಾಧಿಕಾರದ ಮುಂಬರುವ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಯಶವಂತಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರ ಹಾಗೂ ಆಕಾಂಕ್ಷಿಗಳ ಸಭೆ ನಡೆಸಿ, ಮುಂಬರುವ ಚುನಾವಣೆಗೆ ತಯಾರಿ, ಸೇರಿ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯ ಕೋರ್ ಕಮಿಟಿ ಸದಸ್ಯರಾದ ವೆಂಕಟರಾವ್ ನಾಡಗೌಡ, ವಿಧಾನಪರಿಷತ್ ಸದಸ್ಯ ಟಿ.ಎನ್ ಜವರಾಯಿಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ,
ನಗರ ಘಟಕದ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ, ನಗರಸಭೆ ಮಾಜಿ ಅಧ್ಯಕ್ಷ ಹನುಮಂತೇಗೌಡ, ಮುಖಂಡರಾದ ಅನ್ನದಾನಪ್ಪ, ಮುನೇಗೌಡ, ಮುನಿಸ್ವಾಮಿ, ಭರತ್ ಗುಂಡಪ್ಪ ಅವರು ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

