ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ:
ಶಿಕ್ಷಕ ದಂಪತಿ ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ನಗರದಲ್ಲಿ ಜರುಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಸಿದ್ದಾರ್ಥ ಗೋಯಲ್ಪ್ರತಿಕ್ರಿಯಿಸಿ, ಬಾಗಲಕೋಟೆಯಲ್ಲಿ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ಶಾಲೆ ಇದೆ.ಅಕ್ಷಯ್ ಇಂದುಲ್ಕರ್ ಹಾಗೂ ಆನಂದಿ ದಂಪತಿ ಶಾಲೆನಡೆಸುತ್ತಾರೆ.
ಬಾಲಕನಮೇಲೆಹಲ್ಲೆ ಮಾಡುವ ದೃಶ್ಯ ಸಿಕ್ಕಿದೆ. ಮೂರು ತಿಂಗಳ ಹಿಂದೆ ನಡೆದ ಘಟನೆ ಇದು. ಮೊದಲು ಆ ಶಾಲೆಯಲ್ಲಿ ಓರ್ವ ಮಹಿಳೆ ಕೆಲಸ ಮಾಡುತ್ತಿದ್ದರು. ಅವರನ್ನು ಕೆಲಸದಿಂದ ತೆಗೆದ ಮೇಲೆ ವಿಡಿಯೋ ಬಹಿರಂಗಪಡಿಸಿದ್ದಾರೆ.
ಬಾಲಕನ ತಂದೆ, ತಾಯಿ ನವನಗರ ಠಾಣೆಗೆ ದೂರು ನೀಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

