ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಪಂದ್ಯಗಳು ನಡೆಯಲಿದ್ದು ಈ ಪಂದ್ಯಗಳ ವೀಕ್ಷಣೆಗೆ ಬರುವ ಕ್ರಿಕೆಟ್ ಅಭಿಮಾನಿಗಳಿಗೆ ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ವಿಸ್ತರಿಸಿ ಆದೇಶಿಸಿದೆ.
ಬೆಂಗಳೂರಿನಲ್ಲಿ ಪಂದ್ಯಗಳು ನಿಗದಿಯಾಗಿರುವ ದಿನಗಳಂದು ಎಲ್ಲಾ 4 ಟರ್ಮಿನಲ್‌ಗಳು ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯು ಮುಂಜಾನೆ 12.30ರವರೆಗೆ ಇರಲಿದೆ ಎಂದು ತನ್ನ ಪ್ರಕಟಣೆಯಲ್ಲಿ ನಮ್ಮ ಮೆಟ್ರೋ ತಿಳಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ನಾಲ್ಕೂ ಟರ್ಮಿನಲ್‌ಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 1:15ಕ್ಕೆ ಹೊರಡಲಿದೆ ಎಂದು ಬಿಎಂಆರ್‌ಸಿಎಲ್‌ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.