ಮೆಟ್ರೋ ನಿಲ್ದಾಣ ಸ್ಫೋಟಿಸುವ ಬೆದರಿಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಮೆಟ್ರೋ ನಿಲ್ದಾಣ ಸ್ಫೋಟಿಸುವ ಬೆದರಿಕೆ ಹಾಕಿರುವ ಇಮೇಲ್‌ಬಂದಿದ್ದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ.

ಬಿಎಂಆರ್‌ಸಿಎಲ್ ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬೆದರಿಕೆ ಸಂದೇಶ ಕಳುಹಿಸಿದ್ದ. ಅಪರಿಚಿತ ವ್ಯಕ್ತಿ ಕಳಿಸಿದ ಇ-ಮೇಲ್​ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆಯ ಪತ್ರ ಬರೆದಿದ್ದಾನೆ.

- Advertisement - 

ಮೆಟ್ರೋ ಸಿಬ್ಬಂದಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅಪರಿಚಿತ ವ್ಯಕ್ತಿ ಆರೋಪಿಸಿ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತದೆ. ನಾನು ಉಗ್ರಗಾಮಿಯಂತೆ, ಅದರಲ್ಲೂ ಕನ್ನಡಿಗರ ವಿರುದ್ಧ ಎಂದು ಬೆದರಿಕೆ ಹಾಕಿದ್ದಾನೆ.

ಇ-ಮೇಲ್ ಪರಿಶೀಲಿಸಿದ ಬಿಎಂಆರ್‌ಸಿಎಲ್ ಅಧಿಕಾರಿ ತಕ್ಷಣವೇ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

- Advertisement - 

 

 

Share This Article
error: Content is protected !!
";