ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೆಟ್ರೋ ಪ್ರಯಾಣ ದರವನ್ನು ಶೇ.46 ರಷ್ಟು ಏರಿಕೆ ಮಾಡಿದ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ. ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಸಿದ್ದರಾಮಯ್ಯ ಸರ್ಕಾರ ಮತ್ತೊಮ್ಮೆ ಬರೆ ಎಳೆದಿದೆ.
ಬಸ್ ದರ, ಹಾಲಿನ ದರ, ವಿದ್ಯುತ್ ದರ, ಪೆಟ್ರೋಲ್–ಡೀಸೆಲ್ ದರ, ಮುದ್ರಾಂಕ ಶುಲ್ಕ, ಜನನ ಮರಣ ಪ್ರಮಾಣ ಪತ್ರ ಶುಲ್ಕ ಹೆಚ್ಚಳ, ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸಾ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಇದೀಗ ಇಂದಿನಿಂದ ಜಾರಿಗೆ ಬರುವಂತೆ ಮೆಟ್ರೋ ಪ್ರಯಾಣ ದರವನ್ನು ಏರಿಸಿದೆ.
ರಾಜ್ಯದ ಜನರನ್ನು ಪ್ರತಿ ದಿನವೂ ಒಂದಲ್ಲ ಒಂದು ರೀತಿಯಲ್ಲಿ ಸುಲಿಗೆ ಮಾಡುವ ಮೂಲಕ ಖಜಾನೆ ತುಂಬಿಸಿಕೊಳ್ಳುತ್ತಿರುವ ಲೂಟಿಕೋರ ಕಾಂಗ್ರೆಸ್ ಸರ್ಕಾರ ಕರುನಾಡಿಗೆ ಶಾಪವಾಗಿದೆ ಎಂದು ಜೆಡಿಎಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

