ಹಾಲು, ಬಸ್ಸು ದರ ಏರಿಕೆ ಬೆನ್ನಲ್ಲೇ ಮೆಟ್ರೋ ದರ ಶೇ.50 ರಷ್ಟು ಏರಿಕೆ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೆಟ್ರೋಲ್, ಡೀಸೆಲ್, ಹಾಲು, ಬಸ್ಸು ದರ ಏರಿಕೆಯ ಬರೆಯಿಂದ ಈಗಾಗಲೇ ಹೈರಾಣಗಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಬೆಂಗಳೂರು ಮೆಟ್ರೋ ದರವನ್ನ ಏಕಾಏಕಿ 50% ಏರಿಸುವ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ಮೆಟ್ರೋ ದರ 50% ಏರಿಕೆ ಮಾಡಿರುವುದರಿಂದ ಅನೇಕ ಜನಸಾಮಾನ್ಯರಿಗೆ ಈಗ ಮೆಟ್ರೋ ಸಂಚಾರ ಕೈಗೆಟುಕದ ಪರಿಸ್ಥಿತಿ ಎದುರಾಗಿದ್ದು ಮೆಟ್ರೋ ಪ್ರಯಾಣಕ್ಕಿಂತ ಸ್ವಂತ ಸ್ಕೂಟರ್, ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ.

ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸಿ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ಪರಿಸರ ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಸರ್ಕಾರ, ಜನರನ್ನು ಮೆಟ್ರೋದಿಂದ ವಿಮುಖರಾಗುವಂತೆ ಮಾಡುತ್ತಿದೆ.

ಈ ಕೊಡಲೇ ಮೆಟ್ರೋ ದರ ಏರಿಕೆಯ ನಿರ್ಧಾರವನ್ನ ಹಿಂಪಡೆಯಬೇಕು ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಅಶೋಕ್ ಒತ್ತಾಯಿಸಿದ್ದಾರೆ.

 

 

Share This Article
error: Content is protected !!
";