ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ನೀಡಿದ ಮೇಲೆ ಸಂಪನ್ಮೂಲ ಕ್ರೂಢೀಕರಣಕ್ಕೆ ಹಲವು ಸಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದ ಸರ್ಕಾರ ಈಗ ಮತ್ತೆ ಹಾಲಿನ ದರ ಏರಿಕೆಗೆ ಒಪ್ಪಿಗೆ ನೀಡುವ ಮೂಲಕ ಬೆಲೆ ಏರಿಕೆ ಬಿಸಿಯಿಂದ ಜನ ಸಾಮಾನ್ಯರು ತತ್ತರಿಸಿಹೋಗಿದ್ದಾರೆ.
ಹಾಲು ಗ್ರಾಹಕರಿಗೆ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂ.ಗೆ ಹೆಚ್ಚಿಸಲು ಅನುಮೋದನೆ ನೀಡಿದೆ.
ಕೆಳದ ಕೆಲ ತಿಂಗಳುಗಳಿಂದೆ ನಂದಿನಿ ಹಾಲಿನ ದರ ಹೆಚ್ಚಿಸಲಾಗಿತ್ತು. ಹಾಲಿನ ದರ ಏರಿಕೆ ಮಾಡಿ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಹಕರಿಗೆ ಹಾಲು ಬಿಸಿತುಪ್ಪವಾಗಿ ಪರಿಣಮಿಸಲಿದೆ.