ಕಾಂಗ್ರೆಸ್ ಸರ್ಕಾರದಿಂದ 3ನೇ ಬಾರಿ ಹಾಲಿನ ದರ ಏರಿಕೆ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದಿಂದ
3ನೇ ಬಾರಿ ಹಾಲಿನ ದರ ಏರಿಕೆ! ಆಗಸ್ಟ್ 2023 –3⬆ ಏರಿಕೆ, ಜೂನ್ 2024 –2⬆ ಏರಿಕೆ, ಮಾರ್ಚ್ 2025 –4⬆ ಏರಿಕೆ, 20 ತಿಂಗಳಲ್ಲಿ ಒಟ್ಟು – 9⬆ ಏರಿಕೆ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

 ಸಿಎಂ ಸಿದ್ದರಾಮಯ್ಯ ನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 20 ತಿಂಗಳಿನಲ್ಲಿ ಹಾಲಿನ ದರವನ್ನ ಮೂರು ಬಾರಿ ಒಟ್ಟು 9 ರೂಪಾಯಿ ಹೆಚ್ಚಿಸಿದ್ದೀರಿ.

2023ರ ಆಗಸ್ಟ್ ನಲ್ಲಿ  3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ 2024 ಜೂನ್ ನಲ್ಲಿ 2 ರೂಪಾಯಿ ಏರಿಕೆ ಆಯ್ತು. ಈಗ ಮತ್ತೊಮ್ಮೆ ಏಕಾಏಕಿ 4 ರೂಪಾಯಿ ಹೆಚ್ಚಾಗಿದೆ. 

ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ದಿನಬಳಕೆ ವಸ್ತುಗಳ ಬೆಲೆಯಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ ಆರ್.ಅಶೋಕ್ ಟೀಕಿದ್ದಾರೆ.

ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ. ಒಂದು ವೇಳೆ ಗ್ರಾಹಕರ ಮೇಲೆ ಹೊರೆ ಹೊರಿಸುವುದು ಅನಿವಾರ್ಯವಾದರೆ,

ಹೆಚ್ಚಳ ಮಾಡಿರುವ 4 ರೂಪಾಯಿ ನೇರವಾಗಿ ಹಾಲು ಉತ್ಪಾದಕರ ಕೈಸೇರುವಂತೆ ನೋಡಿಕೊಳ್ಳಿ. ಆಡಳಿತ ವೆಚ್ಚ, ಮತ್ತೊಂದು ವೆಚ್ಚ ಎಂದು ಅತ್ತ ರೈತರಿಗೂ ಲಾಭವಿಲ್ಲದೆ ಇತ್ತ ಗ್ರಾಹಕರ ಜೇಬಿಗೂ ಕತ್ತರಿ ಹಾಕಿದರೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

 

Share This Article
error: Content is protected !!
";