ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಸಾವಿರಾರು ಲೀ.ಹಾಲಿನೊಂದಿಗೆ ಸಾಗುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬುಕ್ಕಸಾಗರ ಗೇಟ್ ಬಳಿ ಸಂಭವಿಸಿದೆ.
ರಸ್ತೆ ಬದಿ ನಿಂತಿದ್ದ ಪಿಕಪ್ ವಾಹನದ ಮೇಲೆ ಹಾಲಿನ ಟ್ಯಾಂಕರ್ ಬಿದ್ದಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ಯಾಂಕರ್ ಪಲ್ಟಿಯಾಗಿದ್ದರಿಂದ ಸಾವಿರಾರು ಲೀಟರ್ ಹಾಲು ಮಣ್ಣುಪಾಲಾಗಿ ಸಾಕಷ್ಟು ನಷ್ಟ ಸಂಭವಿಸಿದೆ.