ವಿವಿಧ ಕಾಮಗಾರಿಗೆ ಚಾಲನೆ ಸಚಿವ ಡಿ ಸುಧಾಕರ್

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕು ಐಮಂಗಲ ಹೋಬಳಿಯ ಭರಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಐಮಂಗಲ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವರು ಡಿ ಸುಧಾಕರ್ ಉದ್ಘಾಟಿಸಿ ಮಾತನಾಡಿದರು.

ಸಂಘದ ಅಭಿವೃದ್ಧಿಗೆ ಆಡಳಿತ ಮಂಡಳಿ ಒಟ್ಟುಗೂಡಿ ಉತ್ತಮ ಸ್ಥಾನಕ್ಕೆ ಕೊಂಡೊಯ್ಯಬೇಕೆಂದು ತಿಳಿಸಿದರು. ನೂತನ ಕಟ್ಟಡವು ಸಂಘದ ಆಡಳಿತ ಕಾರ್ಯಕ್ಷಮತೆ ಹೆಚ್ಚಿಸಿ, ರೈತರು ಹಾಗೂ ಸದಸ್ಯರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸಲು ಸಹಕಾರಿಯಾಗಲಿದೆ ಎಂದರು.

- Advertisement - 

ಗ್ರಾಮೀಣ ಆರ್ಥಿಕತೆ ಬಲಪಡಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅತ್ಯಂತ ಮಹತ್ವ, ಈ ನಿಟ್ಟಿನಲ್ಲಿ ಇಂತಹ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ರೈತ ಸಮುದಾಯಕ್ಕೆ ದಿಟ್ಟ ಬೆಂಬಲವಾಗಲಿವೆ ಎಂದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ನಿರ್ದೇಶಕರು ರೈತರು ಅಧಿಕಾರಿ ವರ್ಗದವರು ಮುಖಂಡರಗಳು ಭಾಗವಹಿಸಿದ್ದರು
.

ತಾಲೂಕಿನ ಆದಿವಾಲ ಫಾರಂ,  2 ಎ.ಕೆ. ಕಾಲೋನಿಯಲ್ಲಿ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಯ ಶಂಕು ಸ್ಥಾಪನೆ ಜಿಲ್ಲಾ ಉಸ್ತುವಾರಿ ಸಚಿವರು ಡಿ ಸುಧಾಕರ್ ನೆರವೇರಿಸಿದರು.

- Advertisement - 

ನಂತರ ಮಾತನಾಡಿ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರ, ಸುರಕ್ಷತೆ ಹಾಗೂ ಮೂಲಸೌಕರ್ಯಗಳಲ್ಲಿನ ಸುಧಾರಣೆ ಸಾಧ್ಯವಾಗಲಿದೆ ಎಂದರು ಸಾರ್ವಜನಿಕರ ಅಗತ್ಯಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳನ್ನು ವೇಗವಾಗಿ ಅನುಷ್ಠಾನಗೊಳಿಸುವ ನಮ್ಮ ಬದ್ಧತೆ ಮುಂದುವರಿಯುತ್ತದೆ. ಮೂಲಭೂತ ಸೌಲಭ್ಯಗಳಿಗೆ ಹೆಚ್ಚು ಆದ್ಯತೆ ನೀಡುವುದಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ ಆದಿಜಾಂಬವ ನಿಗಮದ ಅಧ್ಯಕ್ಷರಾದ ಜಿ.ಎಸ್. ಮಂಜುನಾಥ್  ಕಾರ್ಯಕರ್ತರು ಹಾಗೂ ಸಾರ್ವಜನಿಕರು ಇದ್ದರು.

ಹಿರಿಯೂರು ನಗರದ ಆದಿಜಾಂಬವ ಹಾಸ್ಟೆಲ್ ಕಾಂಪೌಂಡ್ ನಿರ್ಮಾಣ ಕಾಮಗಾರಿ ಶಂಕು ಸ್ಥಾಪನೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ನೆರವೇರಿಸಿದರು. ಕಾಮಗಾರಿ ಶೀಘ್ರ ಹಾಗೂ ಗುಣಮಟ್ಟದಿಂದ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.

 ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಉತ್ತಮ ವಾತಾವರಣ ಒದಗಿಸುವ ದಿಸೆಯಲ್ಲಿ ಮಹತ್ವದ ಕಾರ್ಯವಾಗಿದೆ ಎಂದರು. ಈ ಸಂಧರ್ಭದಲ್ಲಿ ಆದಿಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್  ಕಾರ್ಯಕರ್ತರು ಹಾಗೂ ಸಾರ್ವಜನಿಕರು ಇದ್ದರು.

 

 

 

Share This Article
error: Content is protected !!
";