ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಶಿಕ್ಷಣದಲ್ಲಿ ಗುಣಮಟ್ಟದ ಸೌಲಭ್ಯಗಳು ಹೆಚ್ಚಿದರೆ ಮಕ್ಕಳ ಭವಿಷ್ಯ ಇನ್ನಷ್ಟು ಬಲವಾಗುತ್ತದೆ ಎಂಬ ನಂಬಿಕೆಯಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತನ್ನು ಕೊಡಲಾಗುತ್ತಿದೆ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಶಿಕ್ಷಣವಂತರಾಗಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.
ತಾಲ್ಲೂಕಿನ ಉಪ್ಪಾರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ನೂತನ ಕೊಠಡಿಯನ್ನು ಉದ್ಘಾಟಿಸಿ ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

