ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಸೂಚನೆ ಮಾಡುವ ಮೂಲಕ ಅಧಿಕಾರಿಗಳು ಸಾರ್ವಜನಿಕರ ಮನದಲ್ಲಿ ಉಳಿಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.
ತಾಲೂಕಿನ ಸೊಂಡೆಕೆರೆ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿ ಸ್ಥಳದಲ್ಲಿ ಪರಿಶೀಲಿಸಿ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆರಿಸುವಂತೆ ತಿಳಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ನಿರ್ಮಾಣ ಆಗುತ್ತಿರುವ ನೂತನ ಶ್ರೀ ಕೆಂಚಾಂಬ ದೇವಿಯ ದೇವಸ್ಥಾನಕ್ಕೆ 20 ಲಕ್ಷ ರೂ ಅನುದಾನ ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಎಸ್ ಟಿ ಘಟಕದ ಉಪಾಧ್ಯಕ್ಷ ಸೊಂಡೆಕೆರೆ ನಾಗರಾಜ್, ಮುಖಂಡರಾದ ನಾಗರತ್ನಮ್ಮ, ಎಸ್ ಟಿ ಮಂಜುನಾಥ್, ಜೆ ಪ್ರಕಾಶ್, ಬಿಹೆಚ್ ಮಹಾಂತೇಶ್, ಕೆ ನಿಂಗಣ್ಣ, ಗ್ರಾಮದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.