ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎರಡು ದಿನಗಳ ಪ್ರವಾಸಕ್ಕಾಗಿ ಅಕ್ಟೋಬರ್ 25 ರಂದು ಬೆಂಗಳೂರಿಗೆ ಆಗಮಿಸಿದ್ದ ಭಾರತದ ಘನತೆವೆತ್ತ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸುದೇಶ್ ಧನಕರ್ ಅವರನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಶನಿವಾರ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಆತ್ಮೀಯವಾಗಿ ಬೀಳ್ಕೊಟ್ಟರು.
ಗೌರವಾನ್ವಿತ ಉಪರಾಷ್ಟ್ರಪತಿಗಳು ಅಕ್ಟೋಬರ್ 25 ರಂದು ಮೂಲಕ ಮಂಡ್ಯ ಜಿಲ್ಲೆಯ ನಾಗಮಂಗಲದ ಬಿ.ಜಿ. ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಅಕ್ಟೋಬರ್ 26 ರಂದು ಶನಿವಾರ ಬೆಂಗಳೂರು ಅರಮನೆ ಮೈದಾನದಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವದ ನಿಮಿತ್ತ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರಭಾರತೀ ದಿವ್ಯಸಾನಿಧ್ಯದಲ್ಲಿ “ನಮಃ ಶಿವಾಯ” ಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿದರು.
ಈ ಸಂದರ್ಭದಲ್ಲಿ ಸಂಸತ್ ಸದಸ್ಯರಾದ ಲೆಹರ್ ಸಿಂಗ್ ಸಿರೋಯ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯನಂದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಗದೀಶ್ ಜಿ, ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.