ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಮಾನ್ಯ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹಾಗು ಮಾನ್ಯ ಆಹಾರ ನಾಗರೀಕ ಸರಬರಾಜು ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೆ.ಹೆಚ್.ಮುನಿಯಪ್ಪ ಬೇಟಿ ನೀಡಿ ದೇವರ ದರ್ಶನ ಪಡೆದರು.
ಶ್ರೀ ಸ್ವಾಮಿರವರ ದರ್ಶನದ ನಂತರ ದೇವಾಲಯದ ಸಭಾಂಗಣದಲ್ಲಿ ನಡೆದ ಔಪಚಾರಿಕ ಸಭೆಯಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿಪಿ.ದಿನೇಶ್ ಮಾನ್ಯ ಪ್ರವಾಸೋದ್ಯಮ ಸಚಿವರಿಗೆ ವಿವರಿಸಿದರು.
ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ರವರು ದೇವಾಲಯದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು.
ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಾಣ ಮಾಡಿಕೊಡುವುದಾಗಿ ಸಚಿವರಾದ ಹೆಚ್.ಕೆ.ಪಾಟೀಲ್ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್, ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ರಂಗಪ್ಪ, ಕೆ.ಎಸ್.ರವಿ, ಲಕ್ಷ್ಮಾನಾಯ್ಕ, ಆರ್.ವಿ.ಮಹೇಶ್, ಹೇಮಲತಾ ರಮೇಶ್, ಮುಜರಾಯಿ ತಹಶೀಲ್ದಾರ್ ಜಿ.ಜೆ.ಹೇಮಾವತಿ, ಪ್ರಾಧಿಕಾರದ ಉಪಕಾರ್ಯದರ್ಶಿ ಎಂ.ನಾರಾಯಣಸ್ವಾಮಿ, ದೇವಾಲಯದ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.