ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಜಯಪುರದ ಆಲಮಟ್ಟಿ ಜಲಾಶಯದಿಂದ ಫೆಬ್ರವರಿ 20 ಮತ್ತು 21 ರಂದು ತೆಲಂಗಾಣ ರಾಜ್ಯಕ್ಕೆ 1.27 ಟಿಎಂಸಿ ನೀರು ಹರಿಸಲಾಗಿದ್ದು, ಇದಾಗಿ ಒಂದು ವಾರ ಕಳೆದರೂ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಈ ಬಗ್ಗೆ ಪಾಪ ಮಾಹಿತಿಯೇ ಇಲ್ಲವಂತೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎಂ.ಬಿ ಪಾಟೀಲ್ ಅವರ ರಾಜಕೀಯ ಬಣ ಬಡಿದಾಟದ ನಡುವೆ ಸರ್ಕಾರದಲ್ಲಿ ಏನಾಗುತ್ತಿದೆ ಎನ್ನುವ ಮಾಹಿತಿಯೇ ಪರಸ್ಪರ ಹಂಚಿಕೆ ಆಗುತ್ತಿಲ್ಲ. ಹೀಗೆ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗದ ಪರಿಸ್ಥಿತಿಯಲ್ಲಿ ಒಡೆದ ಮನೆಯಂತಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಕನ್ನಡಿಗರು ಏನು ತಾನೆ ನಿರೀಕ್ಷಿಸಲು ಸಾಧ್ಯ? ಎಂದು ವಿಪಕ್ಷ ನಾಯಕರು ಪ್ರಶ್ನಿಸಿದ್ದಾರೆ.