ಮೂರು ಹಸುಗಳನ್ನು ಕೊಡಿಸಿದ ಸಚಿವ ಜಮೀರ್ ಅಹಮದ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಚಿವ ಜಮೀರ್ ಅಹಮದ್ ಖಾನ್ ಅವರು ಹಸುಗಳ ಮಾಲೀಕರ ಕುಟುಂಬಕ್ಕೆ ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸುಗಳನ್ನು ಕೊಡಿಸಿದ್ದಾರೆ.

ಕಾಟನ್ ಪೇಟೆ ವ್ಯಾಪ್ತಿಯ ವಿನಾಯಕ ನಗರದಲ್ಲಿ ಮೂರು ಹಸುಗಳ ಕೆಚ್ಚಲು‌ಕೊಯ್ದ ಅಮಾನವೀಯ ಘಟನೆ ನಡೆದ ಬಳಿಕ ಸ್ಥಳಕ್ಕೆ ಸಚಿವ ಜಮೀರ್ ಅಹಮದ್ ಭೇಟಿ ನೀಡಿ, ಮೂರು ಹಸುಗಳನ್ನು ಕೊಡಿಸುವುದಾಗಿ ಮಾಲೀಕರಿಗೆ ಭರವಸೆ ನೀಡಿದ್ದರು. ಅದರಂತೆ ಹಸುಗಳ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಹಸುಗಳನ್ನು ಬುಧವಾರ ಹಸ್ತಾಂತರಿಸಿದರು.

- Advertisement - 

ಈ ಸಂದರ್ಭದಲ್ಲಿ ಅಮುದಾ ಮಾತನಾಡಿ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿಯೂ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜೊತೆಗಿದ್ದೇವೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";