ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ ಎಂದು ಸಿದ್ದರಾಮಯ್ಯ ಆಪ್ತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ಗುರುವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿರುವ ದೊಡ್ಡಣ್ಣವರ್ ಫಾರ್ಮ್‌ಹೌಸ್‌ನಲ್ಲಿ ಆಯೋಜಿಸಿದ್ದ ಡಿನ್ನರ್ ಮೀಟಿಂಗ್ಗೆ ತಮಗೂ ಆಹ್ವಾನ ಇತ್ತು, ಆದರೆ ಸ್ನೇಹಿತರ ಮನೆಗೆ ತೆರಳಿದ್ದರಿಂದ ಔತಣ ಕೂಟಕ್ಕೆ ಹೋಗಲಾಗಿಲ್ಲ.
ಡಿಕೆಶಿ ಸಿಎಂ ಆಗಲಿ ಎಂದ ನನಗೂ ಆಸೆ ಇದೆ. ಆದರೆ, ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಜಮೀರ್ ತಿಳಿಸಿದರು.
ಪಕ್ಷವು ಹೈಕಮಾಂಡ್ ನಿರ್ದೇಶನದಲ್ಲಿ ಕಾರ್ಯನಿರ್ವಹಿಸುತ್ತದೆ, ನಮ್ಮ ಅಭಿಪ್ರಾಯಗಳನ್ನು ನಾವು ಹೇಳಬಹುದಷ್ಟೇ, ಆದರೆ ಅಂತಿಮ ತೀರ್ಮಾನ ಹೈಕಮಾಂಡ್ ಗೆ ಸೇರಿದ್ದಾಗಿರುತ್ತದೆ ಎಂದು ಜಮೀರ್ ಅವರು ತಿಳಿಸಿದ್ದಾರೆ.

