ದೇಶದ ಅತೀ ದೊಡ್ಡ ಕಾಮಿಡಿಯನ್ ಯಾರು ಸಚಿವ ಖರ್ಗೆ ಅವರೇ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಾಮಿ ಪ್ರಿಯಾಂಕ್ ಖರ್ಗೆ
ಅವರೇ, ಭಾರತೀಯತೆಯೂ ಇಲ್ಲದ, ರಾಷ್ಟ್ರೀಯತೆಯೂ ಇಲ್ಲದ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ ಕಳೆದ ಹತ್ತು ವರ್ಷಗಳಿಂದ ಈ ದೇಶದ ಅತೀ ದೊಡ್ಡ ಕಾಮಿಡಿ ಸಿನಿಮಾ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಸೂಪರ್ ಹಿಟ್ ಕಾಮಿಡಿ ಸಿನಿಮಾದ ಸ್ಟಾರ್ ಕಾಮಿಡಿಯನ್ ಯಾರು ಎಂದು ನಾನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಪಾಪ ನಿಮ್ಮ ತಂದೆಯವರು ಈ ಇಳಿ ವಯಸ್ಸಿನಲ್ಲೂ ಆ ಕಾಮಿಡಿ ಪೀಸ್ ನ ಮಾನ ಉಳಿಸಲು ರಾಜ್ಯದಲ್ಲಿ ಸಿಗಬಹುದಾದ ಅಧಿಕಾರವನ್ನು ತ್ಯಾಗ ಮಾಡಿ ಅಲ್ಲಿ ಆ ಕಾಮಿಡಿ ಪೀಸ್ ಗೆ ರಕ್ಷಣೆ ಕೊಡುತ್ತಿದ್ದಾರಲ್ಲ, ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆಯವರೇ ಎಂದು ಅಶೋಕ್ ಚುಚ್ಚಿದ್ದಾರೆ.

ಅಂದಹಾಗೆ ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ 35 ಶಾಸಕರು ಸಭೆ ಸೇರಿದ್ದರಂತಲ್ಲ, ಅಲ್ಲಿ ತಾವು ಇದ್ದರೋ? ಅಥವಾ

ಆತ್ಮಹತ್ಯೆಗೆ ಕಾರಣವಾದರೂ ಸರಿ, ಕೊಲೆ ಮಾಡಿದರೂ ಸರಿ, ಎಐಸಿಸಿ ಅಧ್ಯಕ್ಷರ ಕೋಟಾದಲ್ಲಿ ತಮ್ಮ ಕುರ್ಚಿ ಮಾತ್ರ ಸುಭದ್ರ ಎಂದು ಯಾವ ಬಣಕ್ಕೂ ಸೇರದೆ ತಟಸ್ಥರಾಗಿರುವ ನಿರ್ಧಾರ ಮಾಡಿದ್ದೀರೋ? ಎಂದು ವಿಪಕ್ಷ ನಾಯಕ ಅಶೋಕ್ ಖಾರವಾಗಿ ಪ್ರಶ್ನಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";