ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
”ಕೈ”ಲಾಗದ ರಾಹುಲ್ ಗಾಂಧಿ ಅವರ ಯೋಗ್ಯತೆಗೆ ಕನ್ನಡಿ ಹಿಡಿಯಲು ತಮ್ಮ ಪರಮಾಪ್ತ ಸಚಿವ ಕೆ.ಎನ್.ರಾಜಣ್ಣ ಅವರ ಕೈಯಲ್ಲಿ ಹೇಳಿಕೆ ಕೊಡಿಸುತ್ತಿದ್ದಾರಾ ಸಿಎಂ ಸಿದ್ದರಾಮಯ್ಯ ನವರು? ಎಂದು ವಿಪಕ್ಷ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
2024ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಮತದಾರರ ಪಟ್ಟಿ ಸಿದ್ಧವಾಗಿದ್ದು, ಆಗ ಕಣ್ಮುಚ್ಚಿ ಕುಳಿತಿದ್ದು, ಈಗ ಹೇಳಿದರೆ ಏನು ಪ್ರಯೋಜನ ಎಂದು ಸಚಿವ ರಾಜಣ್ಣನವರು ಸತ್ಯವಾದ ಮಾತು ಹೇಳಿದ್ದಾರೆ.
ತಮ್ಮ ಈ ಮಾರ್ಮಿಕ ನುಡಿಗಳನ್ನು ಸಚಿವ ರಾಜಣ್ಣನವರು ಪರೋಕ್ಷವಾಗಿ ರಾಹುಲ್ ಗಾಂಧಿ ಅವರಿಗೆ ಹೇಳಿದ್ದೋ ಅಥವಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಹೇಳಿದ್ದೋ, ಸಿಎಂ ಸಿದ್ದರಾಮಯ್ಯನವರೇ ಹೇಳಬೇಕು ಎಂದು ಅಶೋಕ್ ತಾಕೀತು ಮಾಡಿದ್ದಾರೆ.

