ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಂ ಬಿ ಪ್ರಕಾಶ್ ಸಮಿತಿಯು 2009ರಲ್ಲಿ ಪರಶುರಾಮಪುರ ಹೋಬಳಿ ಕೇಂದ್ರವನ್ನು ಹೊಸ ತಾಲೂಕಾಗಿ ಸೃಜಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿರುತ್ತದೆ. ಆದ್ಯತೆ ಮೇರೆಗೆ ಪರಶುರಾಂಪುರ ಹೋಬಳಿ ಕೇಂದ್ರವನ್ನು ಹೊಸ ತಾಲ್ಲೂಕಾಗಿ ಸೃಜಿಸಲು ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸೋಮವಾರ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಇವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಪರಶುರಾಂಪುರ ಹೋಬಳಿಯನ್ನು ತಾಲೂಕು ಕೇಂದ್ರವನ್ನಾಗಿ ಸೃಜಿಸುವ ಪ್ರಸ್ತಾವನೆಯು ಜಿಲ್ಲಾಧಿಕಾರಿಗಳಿಂದ ಸ್ವೀಕೃತವಾಗಿರುವುದಿಲ್ಲ ಹಾಗೂ
ಹೊಸದಾಗಿ ತಾಲ್ಲೂಕುಗಳನ್ನು ರಚಿಸುವ ವಿಷಯವು ಸರ್ಕಾರದ ಸಾಮಾನ್ಯ ನೀತಿಗೆ ಸಂಬಂಧಿಸಿದ್ದು, ಯಾವುದೇ ತಾತ್ವಿಕ ನಿರ್ಣಯ ಕೈಗೊಂಡಿರುವುದಿಲ್ಲ ಅಲ್ಲದೇ ಆರ್ಥಿಕ ಇಲಾಖೆಯು ಇಂತಹ ಪ್ರಸ್ತಾವನೆಗಳಿಗೆ ಅನುಮತಿ ನೀಡುತ್ತಿರುವುದಿಲ್ಲ. 2018-19 ರಲ್ಲಿ 63 ಹೊಸ ತಾಲ್ಲೂಕುಗಳನ್ನು ಸೃಜನೆ ಮಾಡಲಾಗಿದೆ ಎಂದು ಕಂದಾಯ ಸಚಿವರು ತಿಳಿಸಿದರು.
ಎಂ ಬಿ ಪ್ರಕಾಶ್ ಸಮಿತಿಯು 2009ರಲ್ಲಿ ಪರಶುರಾಂಪುರ ಹೋಬಳಿ ಕೇಂದ್ರವನ್ನು ಹೊಸ ತಾಲೂಕಾಗಿ ಸೃಜಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಹಿನ್ನೆಲೆಯಲ್ಲಿ ಆದ್ಯತೆ ಮೇಲೆ ತಾಲೂಕಾಗಿ ಸೃಜಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ಉತ್ತರ ನೀಡಿದರು.

