ಚಂದದ್ರವಳ್ಳಿ ನ್ಯೂಸ್, ಬೆಳಗಾವಿ:
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಪರಿಷತ್ ಕಲಾಪದ ವೇಳೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವಾಚ್ಯ ಶಬ್ದಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ,
ಪ್ರಧಾನಿ ಮೋದಿ ಅವರಿಗೆ ದೂರು ನೀಡಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿದ್ದತೆ ಮಾಡಿಕೊಂಡಿದ್ದಾರೆ. ಸಿಟಿ ರವಿ ಅವಾಚ್ಯ ಶಬ್ದ ಬಳಸಿದ್ದಕ್ಕೆ ಎಲ್ಲ ದಾಖಲೆ ಇದೆ.
ಈ ವಿಚಾರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ದೂರು ನೀಡುವೆ. ವಿಡಿಯೋ ದಾಖಲೆ ಇದ್ದು, ಅದನ್ನು ಕೊಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅವರಿಗೂ ಮಾಹಿತಿ ನೀಡುವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.