ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ” –ಇದು ಅಕ್ಷರಶಃ ನಮ್ಮ ಅವಿದ್ಯಾವಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅನ್ವಯಿಸುತ್ತದೆ!! ಎಂದು ಬಿಜೆಪಿ ಟೀಕಿಸಿದೆ.
ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ ಎಂದು ಮಧು ಬಂಗಾರಪ್ಪ ಅವರೆ ಹಿಂದೊಮ್ಮೆ ಹೇಳಿದ್ದರು. ಅದನ್ನೇ ವಿದ್ಯಾರ್ಥಿಯೊಬ್ಬ ನೆನಪಿಸದ ತಕ್ಷಣ, ಆ ವಿದ್ಯಾರ್ಥಿ ಸೇರಿದಂತೆ ಅಲ್ಲಿನ ಶಿಕ್ಷಕರು ಹಾಗೂ ಬಿಇಒ ಮೇಲೆ ಕ್ರಮ ಕೈಗೊಳ್ಳಿ ಎಂದು ಆದೇಶಿಸಿರುವುದು ನಿಜಕ್ಕೂ ಸ್ಟುಪಿಡ್!!
ಕಾಂಗ್ರೆಸ್ಸಿಗರ ಈ ರೀತಿಯ ಸರ್ವಾಧಿಕಾರಿ ಧೋರಣೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.