ಕೇಂದ್ರ ಸರ್ಕಾರದ ಹಲವು ಸಚಿವರೊಂದಿಗೆ ಮಹತ್ವದ ಚರ್ಚೆ ನಡೆಸಿದ ಸಚಿವ ಎಂ.ಬಿ.ಪಾಟೀಲ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಕೈಗಾರಿಕಾ ಸಚಿವ ಎಂಬಿ.ಪಾಟೀಲ್ ಅವರು
, ನವದೆಹಲಿಗೆ ಭೇಟಿ ನೀಡಿ ಹಲವು ಕೇಂದ್ರ ಸರ್ಕಾರದ ಸಚಿವರುಗಳನ್ನು ಭೇಟಿ ಮಾಡಿ ರಾಜ್ಯದ ವಿವಿಧ ಬೇಡಿಕೆಗಳು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ 2025ರ ಫೆಬ್ರವರಿ 12ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಪಾಟೀಲ ದೆಹಲಿಗೆ ಎರಡು ದಿನಗಳ ಭೇಟಿ ನೀಡಿದ್ದು, ಮೊದಲ ದಿನ ಎಡೆಬಿಡದ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಸರ್ಕಾರದ ಮಹತ್ವದ ಖಾತೆ ಹೊಂದಿರುವ ಸಚಿವರಾದ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಎಂಬಿ ಪಾಟೀಲ್ ಅವರು ಕರ್ನಾಟಕ ರಾಜ್ಯದ ಅಭಿವೃದ್ಧಿ ಕುರಿತು ಸಹಕಾರ ಕೋರಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಏರೋಸ್ಪೇಸ್ ಮತ್ತು ರಕ್ಷಣಾ ವಲಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿ ರಕ್ಷಣಾ ಸಾಧನಗಳ ಉತ್ಪಾದನೆ ಮತ್ತು ಅವುಗಳ ರಫ್ತಿನ ಮೇಲೆ ಇರುವ ನಿರ್ಬಂಧ ತೆರವು, ಡಿಫೆನ್ಸ್ ಕಾರಿಡಾರ್ ಸ್ಥಾಪನೆ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿರುವ ಬಿಎಚ್ಇಎಲ್ ಮತ್ತು ಬಿಇಎಂಎಲ್ ತರಹದ ಕೇಂದ್ರೋದ್ಯಮಗಳಲ್ಲಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಮತ್ತು ಕಾರವಾರದ ನೌಕಾ ವೈಮಾನಿಕ ನಿಲ್ದಾಣದ ರನ್-ವೇಯನ್ನು ಈಗಿರುವ 2 ಕಿ.ಮೀ.ನಿಂದ 2.7 ಕಿ.ಮೀ.ವರೆಗೆ ವಿಸ್ತರಿಸಲು ಬೇಕಾಗಿರುವ ನೆರವು ಕುರಿತು ಚರ್ಚೆ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರೊಂದಿಗಿನ ಭೇಟಿ ವೇಳೆ, ರಾಜ್ಯದ ಕೈಗಾರಿಕಾ ಯೋಜನೆಗಳು, ಸೆಮಿಕಂಡಕ್ಟರ್ ವಲಯ, ಹೈಟೆಕ್-ಉತ್ಪಾದನಾ ಘಟಕಗಳು, ಕೈಗಾರಿಕಾ ಕಾರಿಡಾರ್ ಸೇರಿದಂತೆ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಇ.ವಿ ವಲಯದಲ್ಲಿ ನವೋದ್ಯಮಗಳಿಗೆ 10 ಸಾವಿರ ಕೋಟಿ ರೂ. ಪೂರೈಸಲು ಎದುರಾಗಿರುವ ಸವಾಲು, ಫೇಮ್-3 ಯೋಜನೆ ಜಾರಿಯಲ್ಲಿ ವಿಳಂಬ, ರಕ್ಷಣಾ ತಂತ್ರಜ್ಞಾನ ಹಬ್ ಗಳ ಸ್ಥಾಪನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಎಂಸಿ ಕ್ಲಸ್ಟರ್ ಸ್ಥಾಪನೆಗೆ ಬಾಕಿ ಇರುವ ಅನುಮೋದನೆ, ಹಾರೋಹಳ್ಳಿ, ಕುಡುತಿನಿ ಮತ್ತು ದೇವಕತ್ತಿಕೊಪ್ಪದಲ್ಲಿ ಕೈಗಾರಿಕಾ ಯೋಜನೆಗಳಿಗೆ ಬಾಕಿ ಇರುವ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ, ಸೆಮಿಕಂಡಕ್ಟರ್ ಕಂಪನಿ ಸ್ಥಾಪನೆಯ ತುರ್ತು ಮತ್ತು ಕೇಂದ್ರವು ಇತ್ತೀಚೆಗೆ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ರೂಪಿಸಿರುವ 12 ಸ್ಮಾರ್ಟ್ ಸಿಟಿ ಯೋಜನೆಯಿಂದ ಕರ್ನಾಟಕವನ್ನು ಹೊರಗಿಟ್ಟಿರುವುದರ ಬಗ್ಗೆ ಸಚಿವ ಕುಮಾರಸ್ವಾಮಿಯೊಂದಿಗೆ ಎಂ.ಬಿ.ಪಾಟೀಲ್ ಮಾತುಕತೆ ನಡೆಸಿ ರಾಜ್ಯಕ್ಕೆ ಅನುಕೂಲ ಮಾಡಿಕೊಡುವಂತೆ ಕೋರಿದ್ದಾರೆ.

ಮುಂದುವರೆದು ಎಂ.ಬಿ.ಪಾಟೀಲ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಭೇಟಿ ಸಂದರ್ಭದಲ್ಲಿ, ಬೇಗನೆ ಹಾಳಾಗುವಂತಹ ಪದಾರ್ಥಗಳನ್ನು ವಿಮಾನದ ಮೂಲಕ ಹೊರದೇಶಗಳಿಗೆ ಕಳುಹಿಸುತ್ತಿರುವ ಸಣ್ಣ ಪ್ರಮಾಣದ ರಫ್ತುದಾರರ ಮೇಲೆ ಹೇರಿರುವ ಜಿಎಸ್ಟಿ ತೆರಿಗೆ ರದ್ದುಪಡಿಸಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಆಮದಿನ ಮೇಲೆ ಭಾರೀ ಆಮದು ತೆರಿಗೆ ಮತ್ತು ಸುಂಕ ಕಡಿಮೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";