ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ. ಜಿಲ್ಲೆ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಆವತಿ ಗ್ರಾಮದಲ್ಲಿ ಆಯೋಜಿಸಿದ್ದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜ್ಯೋತಿ ರಥಯಾತ್ರೆಗೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಆವತಿ ಚನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಬಿ ಬಸವರಾಜು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ(ಬಯಪ) ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ,
ಆವತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರತ್ನಮ್ಮ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಸೇರಿ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

