ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಫೆ. 07 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಜಗಳೂರು ತಾಲ್ಲೂಕು ಹುಚ್ಚಂಗಿಪುರದಿಂದ ಹೊರಟು, ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸುವರು. ಬಳಿಕ ಇಲ್ಲಿನ ಮುರುಘರಾಜೇಂದ್ರ ಬೃಹನ್ಮಠ ಆವರಣದಲ್ಲಿನ ಅನುಭವ ಮಂಟಪದಲ್ಲಿ
ಆಯೋಜಿಸಲಾಗಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಮಧ್ಯಾಹ್ನ 2.30 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.