ಆಗಮ ಘಟಿಕೋತ್ಸವದಲ್ಲಿ ಅರ್ಚಕರಿಗೆ ಪ್ರಮಾಣ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಸವನಗುಡಿಯ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ಮುಜರಾಯಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ ಆಯೋಜಿಸಿದ್ದ
ಆಗಮ ಘಟಿಕೋತ್ಸವ – 2025’ ಅರ್ಚಕರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಮಾಣ ಪತ್ರ ವಿತರಿಸಿದರು.

- Advertisement - 

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಶಾಸಕರಾದ ಉದಯ್ ಗರುಡಾಚಾರ್, ರವಿ ಸುಬ್ರಹ್ಮಣ್ಯ, ಶರವಣ, ರಾಜ್ಯ ಧಾರ್ಮಿಕ ಪರಿಷತ್ತು ಅಧ್ಯಕ್ಷ ಕೆ.ಎಂ. ನಾಗರಾಜು, ಆಯುಕ್ತ ವೆಂಕಟೇಶ್, ಅಖಿಲ ಕರ್ನಾಟಕ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಅಧ್ಯಕ್ಷ ಕೆ.ಇ. ರಾಧಾಕೃಷ್ಣ, ಹಾಗೂ ಇತರರು ಉಪಸ್ಥಿತರಿದ್ದರು.

- Advertisement - 

ಘಾಟಿ ಸುಬ್ರಹ್ಮಣ್ಯ, ಚಾಮುಂಡಿ ಬೆಟ್ಟ ಸೇರಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಕ್ಷೇತ್ರ ಮಹತ್ವ ಸಾರಲು ಮಂತ್ರಾಲಯದ ರಥಬೀದಿ ಮಾದರಿಯ ಅಭಿವೃದ್ಧಿ ಕೈಗೊಳ್ಳಲಾಗುವುದು.

ರಾಜ್ಯದಲ್ಲಿ ಸಿವರ್ಗದ 34,217 ದೇವಾಲಯಗಳನ್ನು ಮುಜರಾಯಿ ಇಲಾಖೆ ಅಡಿಯಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ವರ್ಗ 205, ‘ಬಿವರ್ಗದ 195 ದೇವಾಲಯಗಳಿಗೆ ಹೆಚ್ಚಿನ ಆದಾಯ ಇದ್ದರೂ, ಮೂಲಸೌಕರ್ಯ ಸಮಸ್ಯೆ ಎದುರಿಸುತ್ತಿವೆ.

- Advertisement - 

ಮತ್ತು ಬಿವರ್ಗದ ದೇವಾಲಯಗಳ ಅದಾಯದಲ್ಲಿ ಶೇ.10 ರಷ್ಟನ್ನು ಸಾಮಾನ್ಯ ಸಂಗ್ರಹಣಾ ನಿಧಿಗೆ ನೀಡುವ ಮೂಲಕ ಸಿವರ್ಗದ ದೇವಾಲಯಗಳ ಅಭಿವೃದ್ಧಿ ಹಾಗೂ ಅಲ್ಲಿನ ಅರ್ಚಕರಿಗೆ ತಸ್ತಿಕ್ ಹೆಚ್ಚಳ ಮಾಡಲು ವಿಧೇಯಕಗಳಿಗೆ ತಿದ್ದುಪಡಿ ತಂದು ರಾಜ್ಯಪಾಲರಿಗೆ ಸಲ್ಲಿಸಲಾಗಿತ್ತು. ಆದರೆ, ಅವರು ಸಹಿ ಮಾಡಲಿಲ್ಲ. ಹಾಗಾಗಿ ಮುಖ್ಯಮಂತ್ರಿಗಳು ಅದನ್ನು ರಾಷ್ಟ್ರಪತಿ ಅವರಿಗೆ ಸಲ್ಲಿಸಿದ್ದಾರೆ.

 ಅರ್ಚಕರಿಗೆ ವಯಸ್ಸಾದರೆ, ಕಾಯಿಲೆಯಿಂದ ಬಳಲುತ್ತಿದ್ದರೆ ಅವರ ಸ್ಥಾನಕ್ಕೆ ವಾರಸುದಾರರ ನೇಮಕ ಮಾಡಲು ಆಯಾ ವ್ಯಾಪ್ತಿಯ ತಹಸೀಲ್ದಾರರಿಗೆ ಅನುಮತಿ ನೀಡಲಾಗಿದೆ. ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಕಳೆದ ವರ್ಷ ಕಡಿಮೆ ಅರ್ಜಿ ಸಲ್ಲಿಕೆಯಾಗಿದ್ದವು. ಈ ಬಾರಿ ಹೆಚ್ಚಿನ ವಿದ್ಯಾರ್ಥಿಗಳು ಸದುಪಯೋಗ ಪಡೆಯಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದರು.

Share This Article
error: Content is protected !!
";