ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಸ್ ದರ ಹೆಚ್ಚಳ ಖಂಡಿಸಿ, ಬಿಜೆಪಿಯವರು ಪ್ರತಿಭಟನೆ ಮಾಡಿ ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ಆರ್.ರಾಮಲಿಂಗರೆಡ್ಡಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನರನ್ನು ಹಾಗೂ ಅಭಿವೃದ್ಧಿಯನ್ನು ಮರೆತಿದ್ದರು.
ಕೇಂದ್ರ ಸರ್ಕಾರದಲ್ಲಿರುವ ಬಿಜೆಪಿ ಡಾಲರ್ ಬೆಲೆ ಕಡಿಮೆಯಾದರೂ ಪೆಟ್ರೋಲ್ ಡೀಸೆಲ್ ಬೆಲೆ ಕಳೆದ 9 ವರ್ಷಗಳಿಂದ ಕಡಿಮೆ ಮಾಡಿಲ್ಲ ಹಾಗೂ ಇದೇ ಬಿಜೆಪಿ ತಾನು ಆಡಳಿತದಲ್ಲಿದ್ದಾಗ 2020ರಲ್ಲಿ ಬಸ್ ದರ ಹೆಚ್ಚಳ ಮಾಡಿದ್ದರು ಎಂದು ಸಚಿವರು ತಿರುಗೇಟು ನೀಡಿದರು.
ಆಗ ಅವರಿಗೆ ಜನರ ತೊಂದರೆ ತಿಳಿಯಲಿಲ್ಲವೇ ? ಬಡಜನರ ಗ್ಯಾಸ್ ಸಬ್ಸಿಡಿಯನ್ನು ನಿಲ್ಲಿಸಿದರು. ಆಗ ಬಿಜೆಪಿ ಅವರಿಗೆ ಜನರ ಕಷ್ಟ ತಿಳಿಯಲಿಲ್ಲವೆ? ಅಧಿಕಾರದಲ್ಲಿದ್ದಾಗ ಒಳ್ಳೆ ಆಡಳಿತ ನೀಡಿ ನಾಲಕ್ಕು ನಿಗಮಗಳನ್ನು ಅಭಿವೃದ್ಧಿ ಮಾಡಲು ಪ್ರಯತ್ನಿಸಿದ್ದರೆ ಈ ತೊಂದರೆ ನಮಗೆ ಬರುತ್ತಿರಲಿಲ್ಲ ಎಂದು ರಾಮಲಿಂಗರೆಡ್ಡಿ ತಿಳಿಸಿದ್ದಾರೆ.
ಸಮಯಕ್ಕೆ ತಕ್ಕನಾಗಿ ಬಸ್ ಖರೀದಿ ವೇತನ ಪರಿಷ್ಕರಣೆ, ನೇಮಕಾತಿ ಸೇರಿದಂತೆ ಎಲ್ಲವನ್ನು ಸಮಯ ತಕ್ಕನಾಗಿ ಮಾಡಿದರೆ ಇವಾಗ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಬಿಜೆಪಿಯವರು ಮಾಡಿರುವ ಆಡಳಿತ ಲೋಪದಿಂದ ಈಗ ನಮ್ಮ ತಲೆ ಮೇಲೆ 5900 ಕೋಟಿ ಸಾಲ ಇಟ್ಟು ಹೋಗಿದ್ದಾರೆ. ಅವರಿಗೆ ಮುಂಚೆನೇ ತಿಳಿದಿತ್ತೋ ಏನೋ 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಿಕೆ ಬರವಲ್ಲ ಎಂದು ತಿಳಿದು ಈ ರೀತಿಯ ಎಲ್ಲ ಕೆಟ್ಟ ಆಡಳಿತ ನಡೆಸಿ ನಮ್ಮ ತಲೆ ಮೇಲೆ ಕಟ್ಟಿದರು ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಸಾರ್ವಜನಿಕರ ಗಮನ ಸೆಳೆಯಲು ಇಚ್ಛೆಸುತ್ತೇನೆ.. ನಾವು ಬಸ್ ದರ ಹೆಚ್ಚಿಸಿರುವುದು ಎಲ್ಲದಕ್ಕಿಂತ ಕಡಿಮೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನೋಡಿದರೆ ನಮ್ಮ ರಾಜ್ಯದಲ್ಲೇ ಕಡಿಮೆ ಇದೆ ಹಾಗೂ ಉತ್ತಮ ಸಾರಿಗೆ ವ್ಯವಸ್ಥೆ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ನಂಬರ್ 1.
ಈಗಲಾದರೂ ಬಿಜೆಪಿಯವರು ಕೇವಲ ಸುಳ್ಳು ಹೇಳಿ ತನ್ನ ಟ್ವಿಟ್ಟರ್, ಫೇಕ್ ವಾಟ್ಸಪ್ ಸೋಷಿಯಲ್ ಮೀಡಿಯಾ ಯುನಿವರ್ಸಿಟಿಯಿಂದ ಜನರ ದಾರಿ ತಪ್ಪಿಸುವುದನ್ನು ಬಿಡಬೇಕು ಎಂದು ಸಚಿವ ರಾಮಲಿಂಗರೆಡ್ಡಿ ತಾಕೀತು ಮಾಡಿದ್ದಾರೆ.