ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಪ್ರಭಾವಿ ಸಚಿವರೊಬ್ಬರ ಮೇಲೆ ಎರಡು ಸಲ ಹನಿಟ್ರ್ಯಾಪ್ ಕೆಡವಲು ಪ್ರಯತ್ನಗಳು ಆಗಿದ್ದು ಇದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವರ ತೇಜೋವಧೆ ಮಾಡಲು ಇಂಥಹ ಪ್ರಯತ್ನ ನಡೆದಿದೆ. ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂದ್ರೆ ಆರೋಪಿಸಿದಂತಾಗುತ್ತೆ. ಅದು ರಾಜಕೀಯ ಆರೋಪ ಮಾಡಿದಂತಾಗುತ್ತೆ. ಹನಿಟ್ರ್ಯಾಪ್ ಯತ್ನ ಅಂತು ನಡೆದಿದೆ ಎಂದು ಅವರು ಖಚಿತ ಪಡಿಸಿದರು.
ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಕೆಲವರು ಬಂಡವಾಳ ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೇನೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಒತ್ತಾಯಿಸಿದರು.
ಈ ಹನಿಟ್ರ್ಯಾಪ್ ಪ್ರಕರಣದಲ್ಲಿ ಕಾಂಗ್ರೆಸ್ಸಿನವರು ಅಷ್ಟೇ ಅಲ್ಲ. ಬೇರೆ ಪಕ್ಷದ ನಾಯಕರು ಹನಿಟ್ರ್ಯಾಪ್ನಲ್ಲಿ ಸಿಲುಕಿದ್ದಾರೆ. ಇದು ಇಲ್ಲಿಗೆ ನಿಲ್ಲಬೇಕು. ಈ ವಿಚಾರವಾಗಿ ಸಿಎಂ ಮತ್ತು ಗೃಹ ಸಚಿವರ ಜೊತೆ ಮಾತನಾಡಿದ್ದೇನೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಯಾರು ಹನಿಟ್ರ್ಯಾಪ್ ಮಾಡುತ್ತಿದ್ದಾರೆಂದು ಎಲ್ಲರಿಗೂ ಗೊತ್ತು. ಹನಿಟ್ರ್ಯಾಪ್ ಮಾಡುವುದಕ್ಕೆಂದೇ ಒಂದು ತಂಡ ಇದೆ. ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಎಲ್ಲ ಪಕ್ಷದವರೂ ಚರ್ಚಿಸಬೇಕಾದ ವಿಷಯ ಎಂದು ಅವರು ತಿಳಿಸಿದ್ದಾರೆ.