ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನಲ್ಲಿ ಯಾವ ಗ್ರಾಮ ಪಂಚಾಯತಿಯಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ನೇರವಾಗಿ ಎಚ್ಚರಿಕೆ ನೀಡಿದ್ದಾರೆ.
ನಗರದ ಪ್ರವಾಸ ಮಂದಿರ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಅಗಲೀಕರಣ ಮತ್ತು ವಸತಿ ಕುಡಿಯುವ ನೀರಿನ ಯೋಜನೆ ಕುರಿತು ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಹು ಗ್ರಾಮ ಜಲಜೀವನ್ ಮಿಷನ್ ಯೋಜನೆ ಅಡಿ ಕುಡಿಯುವ ನೀರಿನ ಕಾಮಗಾರಿ ತಡ ಮಾಡದೆ ಪೂರ್ಣಗೊಳಿಸಬೇಕು. ನಿರ್ಲಿಕ್ಷಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವ ಸುಧಾಕರ್ ಎಚ್ಚರಿಸಿದರು.
ತಾಲೂಕಿನ ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ. ಜಿಲ್ಲಾ ಸಚಿವರ ಕ್ಷೇತ್ರದಲ್ಲೇ ನೀರಿನ ಸಮಸ್ಯೆ ಎಂದು ಪತ್ರಿಕೆಯಲ್ಲಿ ಪ್ರಕಟವಾಗಿದೆ. ಹಳ್ಳಿ ಜನರ ಛೀಮಾರಿ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಸಚಿವರು ಎಲ್ಲಿ ನೀರಿನ ಸಮಸ್ಯೆ ಇದೆ ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ನೀರಿನ ಸಮಸ್ಯೆ ಇದ್ದರೆ ಕೂಡಲೇ ಕೊಳವೆ ಬಾವಿ ಕೊರೆಸಿ ಜನರಿಗೆ ನೀರು ಕೊಡಬೇಕು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯ ಆಗದಂತೆ ಅಧಿಕಾರಿಗಳು ಎಚ್ಚರದಿಂದಿರಬೇಕು ಎಂದರು.
ಪಿಡಿಒಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಫೋನ್ ಕರೆಯನ್ನು ಸ್ವೀಕರಿಸುವುದಿಲ್ಲ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತೇವೆ ಎಂದು ತಾಲೂಕು ಪಂಚಾಯಿತಿ ಇಒ ಸತೀಶ್ ಕುಮಾರ್ ಅವರನ್ನು ಸಚಿವರು ತರಾಟೆ ತೆಗೆದುಕೊಂಡರು.
ತಾಲೂಕಿನಲ್ಲಿ ಅಡಿಕೆ ಇನ್ನಿತರೆ ತೋಟಗಾರಿಕೆ ಬೆಳೆಗಳ ವಿಸ್ತರಣೆಯಿಂದ ಅಂತರ್ಜಲ ಬಳಕೆ ಹೆಚ್ಚಿದೆ ಕೊಳವೆಬಾವಿಗಳು ಬತ್ತಿದ ಪರಿಣಾಮ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಅಗತ್ಯ ಇರುವಡೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. 10 ಟ್ಯಾಂಕರ್ ಖರೀದಿಗೆ ನಾನೇ ವೈಯಕ್ತಿಕವಾಗಿ ಹಣ ನೀಡುತ್ತೇನೆ. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ಬಂದರೆ ಇದಕ್ಕೆ ತಾಲೂಕು ಪಂಚಾಯಿತಿ ಇ ಓ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದ ಸಚಿವರು ಜಿಲ್ಲಾ ಪಂಚಾಯತಿ ಸಿಇಒ ಮೇಲ್ವಿಚಾರಣೆ ಮಾಡಬೇಕು ಎಂದು ಸಚಿವರು ತಾಕೀತು ಮಾಡಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ ಕಳೆದ ವರ್ಷ ಭೀಕರ ಬರ ಇದ್ದರೂ ಚಳ್ಳಕೆರೆಯಲ್ಲಿ ಸಮರ್ಥವಾಗಿ ಕುಡಿಯುವ ನೀರಿನ ನಿವಾರಣೆ ಮಾಡಲಾಗಿದೆ. ಒಂದು ಟ್ಯಾಂಕರ್ ಕೂಡಾ ಬಳಸಿಲ್ಲ. ಮೊಳಕಾಲ್ಮೂರು ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಭೆಯಲ್ಲಿ ತಿಳಿಸಿದರು.
ಬೀದರ್ ಶ್ರೀರಂಗಪಟ್ಟಣ ಹೆದ್ದಾರಿ ಮುಖ್ಯರಸ್ತೆ ಅಗಲೀಕರಣ ವಸತಿ ಹಕ್ಕು ಪತ್ರ ವಿತರಣೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಹರ್ತಿಕೋಟೆ ಗ್ರಾಮದ ಕುಡಿಯುವ ನೀರಿನ ಕಾಮಗಾರಿ ವಿಳಂಬ ಸಮಸ್ಯೆ ಪರಿಹಾರಕ್ಕೆ ನನ್ನ ಗಮನಕ್ಕೆ ತಂದು ಪರಿಹರಿಸಿಕೊಳ್ಳಿ. ವಿನಾಕಾರಣ ಸಚಿವರ ತಲೆ ಬಿಸಿ ಮಾಡಬೇಡಿ ಎಂದು ಅಧಿಕಾರಿಗಳ ವಿರುದ್ಧ ಜಿಲ್ಲಾ ಪಂಚಾಯತಿ ಸಿಇಒ ಸೋಮಶೇಖರ್ ಹೇಳಿದರು.
“ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಇಒ ಸತೀಶ್ ಕುಮಾರ್ ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ ಪಿಡಿಓಗಳು ಜನರಿಗೆ ಸ್ಪಂದಿಸುತ್ತಿಲ್ಲ ಎಂಬ ದೂರು ಬಂದಿದೆ ಜನರಿಗೆ ಸ್ಪಂದಿಸಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು”.
ಡಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವರು.
ತಹಶೀಲ್ದಾರ್ ರಾಜೇಶ್ ಕುಮಾರ್, ತಾಲೂಕು ಪಂಚಾಯಿತಿ ಇ ಓ ಸತೀಶ್ ಕುಮಾರ್, ನಗರ ಸಭೆ ಪೌರಾಯುಕ್ತ ಎ ವಾಸೀಂ, ಬಿವೈ ಎಸ್ ಪಿ ಶಿವಕುಮಾರ್ ಸಿಪಿಐ ರಾಘವೇಂದ್ರ ಕಂಡಿಕೆ ಎಇಇ ಹಸನ್ ಬಾಷಾ ಇತರರು ಇದ್ದರು.