ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ಗಾಯಿತ್ರಿಪುರ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕ ಡಿ.ಸುಧಾಕರ್ ಶಂಕು ಸ್ಥಾಪನೆ ಮಾಡಿದರು.
ಗ್ರಾಮದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ, ಸುಗಮ ಸಂಚಾರಕ್ಕೆ ಈ ರಸ್ತೆ ಕಾಮಗಾರಿ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.
ಸ್ಥಳೀಯ ಜನತೆಗೆ ಸುಗಮ ಸಂಚಾರ ಮತ್ತು ಉತ್ತಮ ಜೀವನಮಟ್ಟ ಒದಗಿಸುವ ದಿಸೆಯಲ್ಲಿ ಈ ಕಾಮಗಾರಿ ಸಹಕಾರಿಯಾಗಲಿದೆ. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

