ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ರಾಷ್ಟ್ರೀಯ ಅಕಾಡೆಮಿ ಪ್ರೌಢಶಾಲೆಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಂತ ನಂದನ್ ಮತ್ತು ಮೌಲ್ಯ ವಿದ್ಯಾರ್ಥಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ವಿದ್ಯಾರ್ಥಿಗಳ ನಿವಾಸಕ್ಕೆ ತೆರಳಿ ಶುಭ ಹಾರೈಸಿ ಸನ್ಮಾನಿಸಿ ಗೌರವಿಸಿದರು.
ರಾಜ್ಯದಲ್ಲಿ ಹಿರಿಯೂರು ತಾಲೂಕಿನ ಇಬ್ಬರು ವಿದ್ಯಾರ್ಥಿಗಳು ಪ್ರಥಮ ರಾಂಕ್ ಪಡೆದು ಜಿಲ್ಲೆ, ಶಾಲೆ ಮತ್ತು ತಂದೆ ತಾಯಂದಿರಿಗೆ ಕೀರ್ತಿ ತಂದಿದ್ದಾರೆ. ಮಕ್ಕಳ ಸಾಧನೆಗೆ ಸಂತೋಷವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸಂತೋಷ ವ್ಯಕ್ತಪಡಿಸಿದರು.
ಈ ಸಾಧನೆ ಮಾಡಿರುವ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುತ್ತೇನೆ ಎಂದು ಸಚಿವರು ಹೇಳಿದರು.ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ ಖಾದಿ ರಮೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರ ಲಿಂಗೇಗೌಡ, ಸುರಗೊಂಡನಹಳ್ಳಿ ಕೃಷ್ಣಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ್, ಕಂದಿಕೆರೆ ಸುರೇಶ್ ಬಾಬು, ಗಿಡ್ಡೋಬನಹಳ್ಳಿ ಅಶೋಕ್, ಜ್ಞಾನೇಶ್ ವಿದ್ಯಾರ್ಥಿಗಳ ಪೋಷಕರು, ಓಂಕಾರ್, ದೇವರಾಜ್, ಮತ್ತಿತರರು ಇದ್ದರು.