ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಎಸ್.ನಿಜಲಿಂಗಪ್ಪ ರವರ ಸಭಾಂಗಣದಲ್ಲಿ ಆಯೋಜಿಸಿದ್ದ ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಹಿನ್ನೆಲೆ ಇಂದು ಮಾಜಿ ರಾಜ್ಯ ಸಭಾ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ರವರ ಅಧ್ಯಕ್ಷೆಯಲ್ಲಿ ನಡೆದ ಪೂರ್ವಭಾವಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ತಾಪಂ, ಜಿಪಂ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಬೇಕು, ಚುನಾವಣೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಈಗಿನಿಂದಲೇ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್ ಚಂದ್ರಪ್ಪ, ಶಾಸಕರಾದ ಎನ್.ವೈ ಗೋಪಾಲಕೃಷ್ಣ, ಬಿ.ಜಿ ಗೋವಿಂದಪ್ಪ, ಟಿ.ರಘುಮೂರ್ತಿ,ಆದಿಜಾಂಬವ ನಿಗಮ ಮಂಡಳಿ ಅಧ್ಯಕ್ಷ.ಜಿ.ಎಸ್ ಮಂಜುನಾಥ್, ದ್ರಾಕ್ಷರಸ ಮಂಡಳಿ ಅಧ್ಯಕ್ಷ ಯೋಗೇಶ್ ಬಾಬು, ಕೆಪಿಸಿಸಿ ಉಪಾಧ್ಯಕ್ಷರಾದ ಆರ್.ಮಂಜುನಾಥ್, ಮುರುಳೀಧರ ಹಾಲಪ್ಪ,
ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ ತಾಜ್ ಪೀರ್, ಮಾಜಿ ಶಾಸಕ ಎ.ವಿ ಉಮಾಪತಿ, ಜೆಜೆ ಹಟ್ಟಿ ತಿಪ್ಪೇಸ್ವಾಮಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾನಂದಿನಿ ಗೌಡ, ಎ.ನಾಗರಾಜ್, ಎನ್.ಡಿ ಕುಮಾರ್, ಡಾ.ಜೆ.ಆರ್.ಸುಜಾತ, ಖುದ್ದೂಸ್ ಹಾಗೂ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.