ಟಿಎಪಿಸಿಎಂಎಸ್ ರೈತ ಪರ ಕೆಲಸ ಮಾಡಲಿ-ಸಚಿವ ಸುಧಾಕರ್

News Desk

ಟಿಎಪಿಸಿಎಂಎಸ್ ರೈತ ಪರ ಕೆಲಸ ಮಾಡಲಿ-ಸಚಿವ ಸುಧಾಕರ್
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಸಹಕಾರ ಸಂಘದ ನೂತನ ವಾಣಿಜ್ಯ ಮಳಿಗೆಗಳ ಕಟ್ಟಡದ ಶಂಕು ಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ನೆರವೇರಿಸಿದರು.

ನಂತರ ಮಾತನಾಡಿದ ಅವರು ರೈತ ಸ್ನೇಹಿಯಾಗಿ ತಾಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಸಹಕಾರ ಸಂಘ ಕೆಲಸ ಮಾಡುತ್ತಿದೆ. ಜೊತೆಯಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಆರ್ಥಿಕವಾಗಿ ಬಲಿಷ್ಠವಾಗಬೇಕಿದೆ ಎಂದು ಹೇಳಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಶ್ರಾವಣಗೆರೆ ಎಸ್ ಜೆ ಹನುಮಂತರಾಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ಷೇತ್ರದ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಸುಧಾಕರ್ ಅವರ ಸಹಕಾರ, ಸಲಹೆ ಸೂಚನೆಗಳಿಂದ ಸಂಘವನ್ನು ಬಲಿಷ್ಠವಾಗಿ ಕಟ್ಟಲಾಗುತ್ತದೆ. ರೈತರ ಹಿತದೃಷ್ಠಿಯಿಂದ ಹಲವು ರೈತ ಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಜೆ.ಆರ್.ಅಜಯ್ ಕುಮಾರ್, ಟಿಎಪಿಸಿಎಂಎಸ್ ಉಪಾಧ್ಯಕ್ಷೆ ಅನಿತಾ, ಸದಸ್ಯ ಮಹೇಶ್, ಕಾಂಗ್ರೆಸ್ ಮುಖಂಡ ಕಂದಿಕೆರೆ ಜಗದೀಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ ಖಾದಿ ರಮೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಸಾದತ್, ದಿಂಡವಾರ ಮಹೇಶ್, ಅಜೀಜ್, ವಿ ಶಿವಕುಮಾರ್ ಮತ್ತಿತರರು ಇದ್ದರು.

- Advertisement -  - Advertisement - 
Share This Article
error: Content is protected !!
";