ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳುವ ಯೋಜನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಡಿ ಸುಧಾಕರ್ ಉದ್ಘಾಟಿಸಿದರು.
ನಂತರ ಮಾತನಾಡಿದ ಸಚಿವರು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಸಾರ್ವಜನಿಕರಿಗೆ ಡ್ರಾಪ್ಟ ಇ-ಆಸ್ತಿಗಳನ್ನು ವಿತರಿಸಲಾಯಿತು.
ನಗರಸಭೆ ಪೌರಾಯುಕ್ತ ಎ.ವಾಸೀಂ ಮಾತನಾಡಿ ಸರ್ಕಾರ ಉತ್ತಮ ಯೋಜನೆ ರೂಪಿಸಿದೆ. ಸಾರ್ವಜನಿಕರು ಕೆಲಸ ಕಾರ್ಯಗಳನ್ನು ಬಿಟ್ಟು ಕಚೇರಿಗೆ ಅಲೆದಾಡುವುದು ಬೇಕಾಗಿಲ್ಲ. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಮಾಜಿ ನಗರಸಭಾ ಸದಸ್ಯರುಗಳು, ಕಂದಾಯ ಅಧಿಕಾರಿ ಜಬೀವುಲ್ಲಾ, ಕಂದಾಯ ನೀರಿಕ್ಷಕರುಗಳಾದ ವಿಜಯ ಕುಮಾರ್ ಜುನೇದ್ ಸಿರಾಜ್, ಕಂದಾಯ ಸಿಬ್ಬಂದಿಗಳಾದ ಸುರೇಶ, ವಿನಯ್, ಮಲ್ಲಿಕಾರ್ಜುನ, ಮಹಾಂತೇಶ್, ಶ್ರೀನಿವಾಸ್, ಪಾಂಡುರಂಗಪ್ಪ ಹಾಗೂ ಪೌರ ನೌಕರರ ಸಂಘದ ಅಧ್ಯಕ್ಷ ಹನುಮಂತರಾಜ್ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಮತ್ತು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

