ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ಟಿಬಿ ವೃತ್ತದಿಂದ ತಾಲೂಕು ಕಚೇರಿಯವರೆಗೂ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಅದರ ಅಂಗವಾಗಿ ಮುಖ್ಯ ರಸ್ತೆಗೆ ಡಾಂಬರೀಕರಣ ಮಾಡುತ್ತಿರುವುದನ್ನು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಡಿ.ಸುಧಾಕರ್ ಅವರು ವೀಕ್ಷಿಸಿ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಪೌರಾಯುಕ್ತರು, ತಾಂತ್ರಿಕ ಶಾಖೆ ಸಿಬ್ಬಂದಿಗಳು, ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷೆ, ಸ್ಥಾಯಿ ಸಮಿತಿ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಮತ್ತು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.

