ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ಆಡಳಿತಾವಧಿಯಲ್ಲಿ ರೈತರಿಗೆ ಯಾವ ನೋಟಿಸ್ ನೀಡಿಲ್ಲ.
ಆದರೆ, ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜಮೀರ್ ಅವರೇ, ರೈತರಿಗೆ ನೋಟಿಸ್ ನೀಡುವ ಮೊದಲು ವಕ್ಫ್ ಆಸ್ತಿ ಒತ್ತುವರಿ ಮಾಡಿದ ಆ ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಿ ಹಾಗೇ ವಕ್ಫ್ ಸಂಬಂಧ ಹೊರಡಿಸಿರುವ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಿ ಎಂದು ಅವರು ತಾಕೀತು ಮಾಡಿದ್ದಾರೆ.