ಕಾಫಿ ತೋಟದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಿಸಿದ ಸಚಿವ ಜಮೀರ್‌ಆಪ್ತ ಸರ್ಫರಾಜ್ ಖಾನ್

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೇ, ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಜನಸಾಮಾನ್ಯರಿಗೆ ಒಂದು ಕಾನೂನು ? ಸಚಿವ ಜಮೀರ್ ಖಾನ್ ಗೆ ಬೇರೆಯದ್ದೇ ಕಾನೂನು ಇದ್ಯಾ ? ಎಂದು ಜೆಡಿಎಸ್ ಪ್ರಶ್ನಿಸಿದೆ.

ವಸತಿ ಸಚಿವ ಜಮೀರ್‌ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ವ್ಯಾಪ್ತಿಯ ವಣಚಲು ಗ್ರಾಮದ ಸರ್ವೆ ನಂಬರ್ 7/17 ರಲ್ಲಿ 1.06 ಎಕರೆ ಕಾಫಿ ತೋಟದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಿಸಿ, ಸರ್ಕಾರಕ್ಕೆ ಲಕ್ಷಾಂತರ ರೂ. ತೆರಿಗೆಯನ್ನು ವಂಚಿಸಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.  

- Advertisement - 

ವನ್ಯಜೀವಿ ಪರಿಸರ ಸೂಕ್ಷ್ಮವಲಯದಲ್ಲೇ ಅಕ್ರಮವಾಗಿ ರೆಸಾರ್ಟ್‌ನಿರ್ಮಿಸುತ್ತಿರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ ? ಗೊತ್ತಿದ್ದು ಸುಮ್ಮನೆ ಕಣ್ಮುಚ್ಚಿ ಕುಳಿತಿರುವುದು ಏಕೆ ? ಇದರ ಬಗ್ಗೆ ಯಾಕೆ ತುಟಿ ಬಿಚ್ಚುತ್ತಿಲ್ಲ ಅರಣ್ಯ ಸಚಿವರೇ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

 

- Advertisement - 

Share This Article
error: Content is protected !!
";