ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಡಿ ಫ್ಯಾಕ್ಟರಿ ಮಾಲೀಕನ “ಮನೆಹಾಳು ಆತ್ಮರತಿ” ಬಗ್ಗೆ ಕರ್ನಾಟಕ ಕಾಂಗ್ರೆಸ್ ಮರೆತಿದೆ! ಟೆಂಟ್‘ನಲ್ಲಿ ನೀಲಿ ಸಿನಿಮಾ ತೋರಿಸಿದ “ದಂಧೆಕೋರನ ಆತ್ಮರತಿ” ಎಂತಹದ್ದು? ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
“ಕಲೆಕ್ಷನ್ ಗಿರಾಕಿಯ ಆತ್ಮರತಿ” ಇರುವುದು ಮಸಾಜ್ ಪಾರ್ಲರ್‘ಗಳಲ್ಲಿ ಅಲ್ಲವೇ ?
“ಹನಿಟ್ರಾಪ್ ಅಧ್ಯಕ್ಷನ ಆತ್ಮರತಿ”ಗೆ ಸಂಪುಟದ ಮಂತ್ರಿಗಳು, ಶಾಸಕರೇ ಬಲಿಪಶುಗಳಲ್ಲವೇ ? ದೀನ ದಲಿತರು, ಬಡವರು, ಮಹಿಳೆಯರ ಜಮೀನು ಕಬಳಿಸುವ ರಿಯಲ್ ಎಸ್ಟೇಟ್ ಏಜೆಂಟ್’ನ ಆತ್ಮರತಿ ಬಗ್ಗೆ ಬೆಂಗಳೂರಿಗೇ ಚಿರಪರಿಚಿತ ಎಂದು ಟೀಕಿಸಿದೆ.
“ಸ್ವಾರ್ಥ ಸಾಧನೆಗೆ ಬ್ಲ್ಯಾಕ್ ಮೇಲ್” ಮಾಡುವ ಆತ್ಮರತಿಯ ರಾಜಕಾರಣಿಯ ಅನಾಚಾರಗಳ ದೊಡ್ಡ ಪಟ್ಟಿಯೇ ಇದೆ. ರೌಡಿ ರಾಜಕಾರಣಿಯ ಅನುಭವದ ಕೊಚ್ಚೆಗೆ ಯಾರು ತಾನೆ ಸಮ. ನಿಮಗೆ ಯಾರೂ ಪ್ರತಿಸ್ಪರ್ಧಿಗಳೇ ಇಲ್ಲ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ? ರೋಲ್ ಕಾಲ್ ಅಧ್ಯಕ್ಷ? ಡಿ.ಕೆ ಶಿವಕುಮಾರ್ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

