ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಮಿಷನ್ ಕರ್ನಾಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರೇ ವಸೂಲಿ ಏಜೆಂಟ್‘ಗಳಾಗಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ.
ಗಾಣಿಗ ಮಠದ ಅನುದಾನ ಬಿಡುಗಡೆಗೆ ಸಚಿವ ಶಿವರಾಜ್ ತಂಗಡಗಿ ಕಮಿಷನ್ ಕೇಳಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ಪೂರ್ಣಾನಂದ ಪುರಿ ಸ್ವಾಮೀಜಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಆದಿಯಾಗಿ ಮಂತ್ರಿಗಳು, ಕಾಂಗ್ರೆಸ್ ಶಾಸಕರು ಲಂಚ ಹೊಡೆಯುವುದರಲ್ಲೇ ನಿರತರಾಗಿದ್ದಾರೆ. ಇದು ಅಭಿವೃದ್ಧಿ ಶೂನ್ಯ 60% ಕಮಿಷನ್ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.