ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು, ಮಂಡ್ಯ, ಮೈಸೂರು ರೈಲು ಮಾರ್ಗದ ನಡುವೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸಾರ್ವಜನಿಕರ ರೈಲ್ವೆ ಬೇಡಿಕೆಗಳ ಕುರಿತು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು, ಕೇಂದ್ರದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ಅವರೊಂದಿಗೆ ಚರ್ಚೆ ನಡೆಸಿದರು.
ಈ ವೇಳೆ ಎಲ್ಲಾ ಬೇಡಿಕೆಗಳಿಗೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತ್ವರಿತವಾಗಿ ಕ್ರಮ ವಹಿಸುವ ಭರವಸೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

