ಗೃಹ ಲಕ್ಷ್ಮೀ ಯೋಜನೆಯ 2 ತಿಂಗಳ ಬಾಕಿ ಹಣ ಒಂದೇ ಬಾರಿ ಖಾತೆಗೆ ಜಮಾ: ಸಚಿವರ ಹೇಳಿಕೆ

News Desk

ಗೃಹ ಲಕ್ಷ್ಮೀ ಯೋಜನೆಯ 2 ತಿಂಗಳ ಬಾಕಿ ಹಣ ಒಂದೇ ಬಾರಿ ಖಾತೆಗೆ ಜಮಾ: ಸಚಿವರ ಹೇಳಿಕೆ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಗೃಹ ಲಕ್ಷ್ಮೀ ಯೋಜನೆಯಡಿ ಬಾಕಿಯಿರುವ 2 ತಿಂಗಳ ಮೊತ್ತವನ್ನು, ಒಂದೇ ಬಾರಿಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸೆ. 16 ರಂದು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದೆ ಗೃಹ ಲಕ್ಷ್ಮೀ ಯೋಜನೆ ಯಡಿ ಸೌಲಭ್ಯ ಕಲ್ಪಿಸಲು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿತ್ತು. ಅವರಿಗೂ ಕೂಡ ಏಕಕಾಲದಲ್ಲಿಯೇ ಹಣ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ.

ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಪಾವತಿಸುವ ಗೃಹ ಲಕ್ಷ್ಮೀ ಯೋಜನೆಯನ್ನು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಈ ಯೋಜನೆ ನಿತ್ಯ, ಸತ್ಯ ನಿರಂತರವಾಗಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಚಿತ್ರರಂಗದ ಕಲಾವಿದೆಯರ ಜೊತೆ ಮಹಿಳಾ ಆಯೋಗ ಸಭೆ ಆಯೋಜಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಿತಿ ರಚನೆಯಾಗಬೇಕು. ಮುಖ್ಯಮಂತ್ರಿಗಳು ಈಗಾಗಲೇ ಮಾಹಿತಿ ಪಡೆದಿದ್ದಾರೆ. ಚಿತ್ರರಂಗ ಅಷ್ಟೇ ಎಲ್ಲ ಯಾವ ಕ್ಷೇತ್ರಗಳಲ್ಲಿಯೂ ಮಹಿಳೆಯರಿಗೆ ದೌರ್ಜನ್ಯ ಆಗಬಾರದು ಎಂದರು.

ಅಂಗನವಾಡಿ ಕೇಂದ್ರ ಗಳಿಗೆ ಅಕ್ಟೋಬರ್ 1 ರಿಂದಲೇ ಗಟ್ಟಿ ಬೆಲ್ಲ ನೀಡಲಾಗುವುದು ಎಂದು ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

- Advertisement -  - Advertisement - 
Share This Article
error: Content is protected !!
";