ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಉಪವಿಭಾಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಯನ್ನು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿ ಜಿಲ್ಲಾ ಮಾಹಿತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ತಾಲ್ಲೂಕು ವಿಸ್ತರಣಾಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಚಿತ್ರದುರ್ಗ ಉಪವಿಭಾಗ ಸರಸ್ವತಿ ಪುರಂ 1ನೇ ಮುಖ್ಯರಸ್ತೆ ಚಿತ್ರದುರ್ಗ ಈ ಕಚೇರಿಯನ್ನು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವು ಆಡಳಿತಾತ್ಮಕ ಕಾರಣಗಳಿಂದ ಪ್ರಸ್ತುತ ಜಿಲ್ಲಾ ಅಧಿಕಾರಿಗಳ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,
ಶ್ರೀರಾಮ ಕಾಂಪ್ಲೆಕ್ಸ್, 1ನೇ ಮಹಡಿ, ಸ್ಟೇಡಿಯಂ ರಸ್ತೆ, ಚಿತ್ರದುರ್ಗ ಇಲ್ಲಿಗೆ ಸ್ಥಳಾಂತರಗೊಂಡಿರುವುದರಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳು ಕಚೇರಿಯ ವಿಳಾಸಕ್ಕೆ ಭೇಟಿ ನೀಡಿ, ಅಗತ್ಯ ಮಾಹಿತಿ, ನೆರವು ಪಡೆಯಬಹುದು ಎಂದು ಚಿತ್ರದುರ್ಗ ಉಪವಿಭಾಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.